ನ್ಯೂಸ್ ನಾಟೌಟ್: ಚೈತ್ರಾ ಕುಂದಾಪುರ ಬಂಧನ ವಿಷಯವಾಗಿ ಪ್ರತಿಕ್ರಿಯಿಸಿದ ವಂಚನೆ ಮಾಡಿದ್ದಾರೆ ಎಂದರೆ ತನಿಖೆ ಆಗಲಿ, ಕಾನೂನು ಕ್ರಮ ಆಗಲಿ ಆದರೆ ಅನಾವಶ್ಯಕ ಹಾಗೂ ದುರುದ್ದೇಶಪೂರ್ವಕವಾಗಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ನಾವು ಪ್ರತಿಭಟನೆ ಮಾಡುತ್ತೇವೆ ಎಂದರು.ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಹೇಳಿಕೆ ನೀಡಿದ ಆರಗ ಜ್ಞಾನೇಂದ್ರ ರಾಜಕೀಯ ಉದ್ದೇಶದಿಂದ ದುರುದ್ದೇಶಪೂರ್ವಕವಾಗಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ ಎನ್ನಲಾಗಿದೆ.
ಈ ವೇಳೆ ರಾಜ್ಯದ ಬರ ಪರಿಸ್ಥಿತಿಯ ಬಗ್ಗೆ ಮಾತನಾಡಿದ ಅವರು, ʼರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದೆ.ಮಲೆನಾಡಿನಲ್ಲಿ ಇಷ್ಟು ಮಳೆ ಕಡಿಮೆಯಾಗಿರುವುದು ನನ್ನ ಜೀವನದಲ್ಲಿ ನಾನೂ ನೋಡಿರಲಿಲ್ಲ.
ಜಮೀನ ನಲ್ಲಿ ಅರ್ಧಂಬರ್ಧ ನಾಟಿಯಾಗಿದೆ. ಇನ್ನೆರಡು ತಿಂಗಳಲ್ಲಿ ನೀರಿನ ಅಭಾವ ಸಹ ತಲೆದೋರಲಿದೆ.ತೀರ್ಥಹಳ್ಳಿ, ಹೊಸನಗರ ಸೇರಿದಂತೆ ಉಳಿದ ತಾಲೂಕುಗಳಲ್ಲೂ ಮಳೆ ಕೊರತೆಯಾಗಿದೆ ತಕ್ಷಣವೇ ಬರ ಘೋಷಣೆ ಮಾಡಬೇಕು. ಇದಕ್ಕೆ ಮೀನಾಮೇಷ ಎಣಿಸಬಾರದು. ಈ ಹಿಂದೆ ಅತಿವೃಷ್ಟಿಯಾದಾಗ ರಾಜ್ಯ ಸರ್ಕಾರದಿಂದ ಪರಿಹಾರ ಕೊಟ್ಟು ಸಾಂತ್ವನ ಹೇಳಿದ್ದೇವು ಅದೇ ರೀತಿ ಬರಗಾಲದ ಈ ಸಂದರ್ಭದಲ್ಲಿ ಸರ್ಕಾರ ಜನರ ನೆರವಿಗೆ ಬರಬೇಕುʼ ಎಂದು ಒತ್ತಾಯಿಸಿದ್ದಾರೆ.