ನ್ಯೂಸ್ ನಾಟೌಟ್ : ಇತ್ತೀಚಿಗೆ ಲವ್ ಜಿಹಾದ್ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿರುವುದನ್ನು ನೀವು ಓದಿದ್ದೀರಿ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಹಾಗೆ ಪರಿಗಣಿಸಿದ ಪೊಲೀಸರು ಲವ್ ಜಿಹಾದ್ ಪ್ರಕರಣದ ತನಿಖೆಗೆ ಮುಂದಾಗಿ ಲವ್ ಜಿಹಾದ್ ಹೀಗೂ ನಡೆಯಬಹುದೇ ಎಂದು ಒಂದು ಕ್ಷಣ ಬೆಚ್ಚಿಬಿದ್ದ ಪ್ರಕರಣದ ಬಗ್ಗೆ ವರದಿಯಾಗಿದೆ.
ಇತ್ತೀಚೆಗೆ ಯುವತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ (Social Media) ಲವ್ ಜಿಹಾದ್ ಆರೋಪ ಮಾಡಿ ಆ ಪ್ರಕಟಣೆಯನ್ನು ಪೊಲೀಸರಿಗೆ ಟ್ಯಾಗ್ ಮಾಡಿ ಪೋಸ್ಟ್ ಹಾಕಿದ್ದರು. ಇದನ್ನು ಗಮನಿಸಿದ ನಗರ ಪೊಲೀಸರು (Bengaluru Police) ಯುವತಿಯಿಂದ ಹೇಳಿಕೆ ಪಡೆದು ತನಿಖೆ ನಡೆಸಿದ್ದರು. ಈ ಪ್ರಕಾರವಾಗಿ ಕಾಶ್ಮೀರ್ ಮೂಲದ ಯುವಕನ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ಶುರು ಮಾಡಲಾಗಿತ್ತು. ಸದ್ಯ ಈಗ ಘಟನೆಯ ಸತ್ಯಾಂಶ ಬಯಲಾಗಿದ್ದು ಈ ಪ್ರಕರಣದಲ್ಲಿ ಲವ್ ಜಿಹಾದ್ ಆರೋಪ ಸುಳ್ಳು ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
37 ವರ್ಷದ ಬೆಂಗಳೂರು ಮಹಿಳೆಯ ‘ಲವ್ ಜಿಹಾದ್’ ಆರೋಪದ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಪೊಲೀಸರು, ಈ ಪ್ರಕರಣದಲ್ಲಿ ಯಾವುದೇ ರೀತಿಯಲ್ಲೂ ಲವ್ ಜಿಹಾದ್ ಆಯಾಮ ಕಂಡು ಬಂದಿಲ್ಲ. ಕಾಶ್ಮೀರ್ ಯುವಕ ಹಾಗೂ ಬೆಂಗಳೂರು ಯುವತಿ ಇಬ್ಬರೂ ಎರಡು ವರ್ಷದ ಹಿಂದೆಯೇ ಬ್ರೇಕ್ ಆಪ್ ಆಗಿದ್ದಾರೆ. ಸದ್ಯ ಈಗ ಯುವಕ ಬೇರೆ ಯುವತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ ಎಂದು ವಿಷಯ ತಿಳಿಯುತ್ತಿದ್ದಂತೆ ಬೆಂಗಳೂರು ಯುವತಿ ಲವ್ ಜಿಹಾದ್ ಆರೋಪ ಮಾಡಿದ್ದಾರೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಲವ್ ಜಿಹಾದ್ ಆರೋಪ ಮಾಡಿ ಯುವತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಇದನ್ನು ಗಮನಿಸಿದ ಪೊಲೀಸರು ಯುವತಿಯನ್ನು ಪತ್ತೆ ಮಾಡಿ ಹೇಳಿಕೆ ಪಡೆದು ಯುವಕನ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ತನಿಖೆ ಆರಂಭಿಸಿದ್ದ ಪೊಲೀಸರು ಕಳೆದ ವಾರ ಕಾಶ್ಮೀರದ ಶ್ರೀನಗರದ ಜಕುರಾ ಪ್ರದೇಶದ ಮೊಜಿಫ್ ಅಶ್ರಫ್ ಬೇಗ್ (32) ಎಂಬಾತನನ್ನು ಬೆಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದರು. ಬಳಿಕ ಭಾರತೀಯ ದಂಡ ಸಂಹಿತೆಯಡಿ ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ, ಕ್ರಿಮಿನಲ್ ಬೆದರಿಕೆ ಮತ್ತು ವಂಚನೆಗೆ ಸಂಬಂಧಿಸಿದ ಆರೋಪಗಳು ಹಾಗೂ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಕಾಯಿದೆಯಡಿ ಅಕ್ರಮ ಮತಾಂತರಕ್ಕೆ ಯತ್ನಿಸಿದ ಆರೋಪದಡಿ ಅಶ್ರಫ್ ಬೇಗ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.