ನ್ಯೂಸ್ ನಾಟೌಟ್: ಬಿಜೆಪಿ ಆಡಳಿತದಲ್ಲಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದೇ ಬಂದಿದ್ದು ಜನತೆಗೆ ಸಹಾಯವಾಗುತ್ತಿದ್ದ ಬಿಜೆಪಿಯ ಯೋಜನೆಗಳನ್ನು ಕಾಂಗ್ರೆಸ್ ನಿಲ್ಲಿಸುವ ಕೆಲಸಕ್ಕೆ ಕೈ ಹಾಕಿದೆ. ಇದನ್ನು ಬಿಜೆಪಿ ಕಟು ಪದಗಳಿಂದ ಟೀಕಿಸುತ್ತದೆ ಅಲ್ಲದೆ ಸೆ.11 ರಂದು ಸುಳ್ಯ ತಾಲೂಕು ಕಚೇರಿ ಎದುರು ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನಡೆಯಲಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದ್ದಾರೆ.
ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್ ಸಿಂಹ ನಾಯಕ್ , ಬಿಜೆಪಿ ಸರಕಾರ ರಾಜ್ಯದ ರೈತರಿಗೆ, ವಿದ್ಯಾರ್ಥಿಗಳಿಗೆ, ಕಾರ್ಮಿಕರಿಗೆ ಜನಸಾಮಾನ್ಯ ರಿಗೆ ಸುಮಾರು 18 ಕಾರ್ಯಕ್ರಮ ಜಾರಿಗೊಳಿಸಿತ್ತು. ಆದರೆ ಈಗ ರಾಜ್ಯದ ಕಾಂಗ್ರೆಸ್ ಸರಕಾರ ಅದನ್ನು ಹಿಂಪಡೆದುಕೊಂಡಿದೆ. ಜನರಿಗೆ ಅನ್ಯಾಯ ಮಾಡಿದೆ. ಇದನ್ನು ಖಂಡಿಸಿ ಕಾಂಗ್ರೆಸ್ ಸರಕಾರದ ವಿರುದ್ಧ ಸೆ.11 ರಂದು ಸುಳ್ಯ ತಾಲೂಕು ಕಚೇರಿ ಎದುರು ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.
ಲೋಕಸಭಾ ಚುನಾವಣೆ ತಯಾರಿ
ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿಯನ್ನು ನಡೆಸಿದೆ. ಸಾಮಾಜಿಕ ಜಾಲತಾಣಗಳನ್ನು ಒಳಗೊಂಡಂತೆ ಬೂತ್ ಮಟ್ಟದ ವರೆಗೆ ಪಕ್ಷ ಸಂಘಟನಾತ್ಮಕಗೊಳಿಸುವ ನಿಟ್ಟಿನಲ್ಲಿ ಸಭೆಗಳು ನಡೆದಿದೆ. ನಮಗೆ ವಿಶ್ವಾಸ ಇದೆ. ಕಳೆದ 9 ವರ್ಷದಲ್ಲಿ ಕೇಂದ್ರ ಸರಕಾರದ ಸಾಧನೆಯನ್ನು ದೇಶದ ಜನರು ಮೆಚ್ಚಿದ್ದಾರೆ. ಮೋದಿ ಸರ್ಕಾರದ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬದುಕಿನಲ್ಲೂ ಬೆಳಕು ತರುವಂತ ಯೋಜನೆಯನ್ನು ನೀಡಿದೆ. ಆದ್ದರಿಂದ ಮೂರನೇ ಅವಧಿಯಲ್ಲಿಯೂ ಬಿಜೆಪಿ ಸರಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತದೆ. ಆ ನಿಟ್ಟಿನಲ್ಲಿ ತಯಾರಿಗಳು ನಡೆಯುತ್ತಿದೆ ಎಂದು ತಿಳಿಸಿದರು.
ಶಾಸಕಿ ಭಾಗೀರಥಿ ಮುರುಳ್ಯ, ರಾಧಾಕೃಷ್ಣ ಕಸ್ತೂರಿ ಪಂಜ, ಹರೀಶ್ ಕಂಜಿಪಿಲಿ, ಸುಭೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ಕೃಷ್ಣ ಶೆಟ್ಟಿ ಕಡಬ, ದೇವದಾಸ ಶೆಟ್ಟಿ, ರಮೇಶ್ ಕಲ್ಲುರೆ ಉಪಸ್ಥಿತರಿದ್ದರು