ನ್ಯೂಸ್ ನಾಟೌಟ್: ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯಿಂದ 5 ಕೋಟಿ ರೂ. ಹಣವನ್ನು ಪಡೆದು ವಂಚನೆ ಮಾಡಿದ ಚೈತ್ರಾ ಕುಂದಾಪುರ ಸೇರಿದಂತೆ ಐವರನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿತ್ತು.
ಈ ವೇಳೆ ನ್ಯಾಯಾಧೀಶರ ಮುಂದೆ ಉಡುಪಿಯಲ್ಲಿ ಪೊಲೀಸರು ನನ್ನನ್ನು ಹಿಡಿದು ಎಳೆದಾಡಿ ನೋವು ಮಾಡಿದ್ದಾರೆ ಎಂದು ಚೈತ್ರಾ ಗಳಗಳನೇ ಕಣ್ಣೀರಿಟ್ಟಿದ್ದಾರೆ. ಈ ಬಗ್ಗೆ ವಿಚಾರಣೆ ಮಾಡಿದ ನ್ಯಾಯಾಧೀಶರು 10 ದಿನಗಳ ಕಾಲ (ಸೆ.23) ಪೊಲೀಸರ ವಶಕ್ಕೆ ಕೊಡಲಾಗಿದೆ.
ಉಡುಪಿಯ ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂ. ಹಣವನ್ನು ಪಡೆದಿದ್ದಾರೆ. ಹಂತ ಹಂತವಾಗಿ ಅವರಿಗೆ ವಿವಿಧ ಮಾರ್ಗದಲ್ಲಿ ವಂಚನೆ ಮಾಡಿ ದಿಕ್ಕು ತಪ್ಪಿಸಿದ್ದಾರೆ.
ನಂತರ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ಸಿಗದಿದ್ದರಿಂದ ಮೋಸ ಹೋಗಿರುವ ಬಗ್ಗೆ ಅರಿವಾಗಿ ಉದ್ಯಮಿ ದೂರು ಕೊಟ್ಟಿದ್ದರು. ಈ ವಂಚನೆ ಜಾಲದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಒಟ್ಟು 10 ಜನರು ಭಾಗಿಯಾಗಿದ್ದಾರೆ ಎಂದು ದೂರು ದಾಖಲಿಸಲಾಗಿದೆ.
ನಿನ್ನೆ ರಾತ್ರಿ ವೇಳೆ ಉಡುಪಿಯ ಶ್ರೀಕೃಷ್ಣ ಮಠದ ಸಿನಿಮೀಯ ಶೈಲಿಯಲ್ಲಿ ದಾಳಿ ಮಾಡಿ ಚೈತ್ರಾ ಕುಂದಾಪುರ ಅವರನ್ನು ಬಂಧಿಸಲಾಗಿತ್ತು. ಇದಾದ ನಂತರ ವಂಚನೆಮಾಡಿದ 6ಜನರನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ಇನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಚೈತ್ರಾ ಕುಂದಾಪುರ ಅವರನ್ನು ವಿಚಾರಣೆ ಮಾಡಿದಾಗ ಕೋರ್ಟ್ ಕಟಕಟೆಯಲ್ಲಿ ನಿಂತು ಪೊಲೀಸರು ನನ್ನನ್ನು ಎಳೆದಾಡಿ ನೋವುಂಟು ಮಾಡಿದ್ದಾರೆ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟು ದೂರಿದ. ಉಡುಪಿ ಪೊಲೀಸರಿಂದ ತೊಂದರೆ ಆಗಿದೆ ಎಂದು ಹೇಳಿದ್ದಾರೆ.
ಆದರೆ ಈ ಆರೋಪವನ್ನು ಪೊಲೀಸರು ನಿರಾಕರಿಸಿದ್ದು ನಮ್ಮಲ್ಲಿ ವಿಡಿಯೋ ಸಾಕ್ಷ್ಯಾಧಾರಗಳಿವೆ ಎಂದಿದ್ದಾರೆ ಜೊತೆಗೆ ಮೆಡಿಕಲ್ ರಿಪೋರ್ಟ್ ಕೂಡ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.