ನ್ಯೂಸ್ ನಾಟೌಟ್ : ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಾಗುವುದರಿಂದ ಕೊಡಗಿನ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತಯವಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ತಿಳಿಸಿದೆ.
ದಿನಾಂಕ 13,09,2023ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 4:00 ಗಂಟೆಯ ವರೆಗೆ 220ಕೆ.ವಿ ಕುಶಾಲನಗರ, 33/11ಕೆವಿ ಸೋಮವಾರಪೇಟೆ, 66/11KV ಆಲೂರು ,ಸಿದ್ದಾಪುರ, 66/11ಕೆವಿ ಸುಂಟಿಕೊಪ್ಪ, 66/11ಕೆವಿ ಮಡಿಕೇರಿ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಕುಶಾಲನಗರ, ಕೂಡಿಗೆ, ನಂಜರಾಯಪಟ್ಟಣ, ಸುಂಟಿಕೊಪ್ಪ, ಚೆಟ್ಟಳ್ಳಿ, ಸೋಮವಾರಪೇಟೆ, ಶಾಂತಳ್ಳಿ, ಕುಮಾರಹಳ್ಳಿ, ಗೌಡಳ್ಳಿ, ಹೆಗ್ಗಡಮನೆ, ಅಟ್ಟೂರುಕಟ್ಟೆ, ಐಗೂರು, ಹೊಸಗುತ್ತಿ, ಗಣಗೂರು ಗೋಣಿಮರೂರು, ಆಲೂರು ಸಿದ್ದಾಪುರ, ಮಾಲಂಬಿ, ಸಿದ್ಧಲಿಂಗಪುರ, ಮಡಿಕೇರಿ ಪಟ್ಟಣ, ಮೋಯಿಕೇರಿ ಗಾಳಿಬೀಡು, ಕುಂಡಮೇಸ್ತ್ರಿ, ಮೇಕೇರಿ, ಕಡಗದಾಳು, ಸಂಪಾಜೆ, ಭಾಗಮಂಡಲ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಿಗಮ ತಿಳಿಸಿದೆ.
ಸಾರ್ವಜನಿಕರು ಸಹಕರಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಕಾರ್ಯನಿರ್ವಾಹಕ ಇಂಜಿನಿಯರ್ (ವಿ), ಮಡಿಕೇರಿ ವಿಭಾಗ ಸಾರ್ವಜನಿಕರಲ್ಲಿ ಮನವಿ ಮಾಡಿದೆ.