ನ್ಯೂಸ್ ನಾಟೌಟ್ : ಒಂಟಿ ಮಹಿಳೆಯೊಬ್ಬಳು ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ಬಲೆಗೆ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ನಾಪೋಕ್ಲುವಿನಲ್ಲಿ ನಡೆದಿದೆ.
ಇತ್ತೀಚಿನ ದಿನಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಭಾರಿ ದೂರುಗಳು ಕೇಳಿ ಬಂದಿದ್ದವು. ಈ ಪ್ರಕಾರವಾಗಿ ಠಾಣೆಗಳಿಗೆ ದೂರು ಬಂದಿರುವ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ ಪೊಲೀಸರು ಮಹಿಳೆಯನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಮಹಿಳೆಯಿಂದ 2 ಕೆ.ಜಿ 260 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈಕೆಯ ಹೆಸರು ವಿಲ್ದಾನ್ ಬೇಗಂ ( 44 ವರ್ಷ). ಚಾಮುಂಡಿ ಪೆಟ್ರೋಲ್ ಬಂಕ್ ಸಮೀಪದ ಬಸ್ ನಿಲ್ದಾಣದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಡಿಎಸ್ ಪಿ ಆರ್. ವಿ.ಗಂಗಾಧರಪ್ಪ ಮತ್ತು ಸಿಪಿಐ ಅನೂಪ್ ಮಾದಪ್ಪ ಮಡಿಕೇರಿ ಗ್ರಾಮಾಂತರ ವೃತ್ತ, ಪಿ.ಎಸ್ ಐ ಮಂಜುನಾಧ್, ನಾಪೋಕ್ಲು ಪೊಲೀಸ್ ಠಾಣೆ ಹಾಗೂ ಸಿಬ್ಬಂದಿ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಆರೋಪಿಯನ್ನು ಸೆರೆ ಹಿಡಿಯಲಾಗಿದೆ.