ನ್ಯೂಸ್ ನಾಟೌಟ್: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಏಕಸದಸ್ಯಪೀಠ ತೀರ್ಪು ನೀಡಿದೆ. ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಎ. ಮಂಜು, ವಕೀಲ ದೇವರಾಜ ಗೌಡ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿಯ ವಿಚಾರಣೆ ನಡೆಸಿದ ಏಕ ಸದಸ್ಯಪೀಠ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ತೀರ್ಪು ನೀಡಿದೆ.
ಪ್ರಜ್ವಲ್ ರೇವಣ್ಣ ಅವರು ತನ್ನ ಆಸ್ತಿಯ ವಿವರವನ್ನು ಮುಚ್ಚಿಟ್ಟು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಆದ್ದರಿಂದ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸುವಂತೆ 2019ರಲ್ಲಿ ಎ.ಮಂಜು ಮತ್ತು ದೇವರಾಜೇ ಗೌಡ ಎಂಬವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಏಕಸದಸ್ಯಪೀಠ ನೀಡಿದ ತೀರ್ಪಿನಿಂದ ಇನ್ನೂ ಆರು ವರ್ಷ ಪ್ರಜ್ವಲ್ ರೇವಣ್ಣ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಮುಂಬರುವ 2024ರ ಲೋಕಸಭಾ ಚುನಾವಣೆಗೆ ಪ್ರಜ್ವಲ್ ಈಗಾಗಲೇ ಕ್ಷೇತ್ರದಲ್ಲಿ ಬಿರುಸಿನ ತಯಾರಿ ನಡೆಸಿದ್ದಾರೆ. ಆದರೆ ಇದೀಗ ಕೋರ್ಟ್ ನೀಡಿದ ತೀರ್ಪು ಪ್ರಜ್ವಲ್ ರೇವಣ್ಣ ಅವರಿಗೆ ಭಾರಿ ಹಿನ್ನಡೆಯಾಗಿದೆ.
ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ ತೀರ್ಪಿನ ಬಗ್ಗೆ ಜೆಡಿಎಸ್ ಶಾಸಕ ಎ. ಮಂಜು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ನಮಗೆ ಹೈಕೋರ್ಟ್ನಲ್ಲಿಮ ನ್ಯಾಯ ಸಿಕ್ಕಿದೆ. ನಮ್ಮ ಕಾನೂನು ಹೋರಾಟಕ್ಕೆ ನ್ಯಾ ಸಿಕ್ಕಿದೆ. ಚುನಾವಣಾ ಆಯೋಗಕ್ಕೆ ಮಾಹಿತಿ ನೀಡುವಾಗ ಯಾರೂ ಕೂಡ ತಪ್ಪು ಮಾಹಿತಿ ನೀಡಬಾರದು. ಕೋರ್ಟ್ ತೀರ್ಪು ಎಲ್ಲಾ ರಾಜಕಾರಣಿಗಳಿಗೆ ಎಚ್ಚರಿಕೆಯಾಗಿದೆ ಎಂದಿದ್ದಾರೆ.
ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ ತೀರ್ಪಿನ ಬಳಿಕ ಪ್ರಜ್ವಲ್ ರೇವಣ್ಣ ಪರ ವಕೀಲರು ಸುಪ್ರಿಂಕೋರ್ಟ್ಗೆ ಮೇಲ್ಮನವಿಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೋರ್ಟ್ ತೀರ್ಪು ಹೊರಬಿದ್ದಾಗ ಪ್ರಜ್ವಲ್ ರೇವಣ್ಣ ಹಾಸನದಲ್ಲಿ ತನ್ನ ಮನೆಯಲ್ಲಿದ್ದರೂ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಹೊರ ಹೋಗಿದ್ದಾರೆ ಎಂದು ತಿಳಿದುಬಂದಿದೆ.