ನ್ಯೂಸ್ ನಾಟೌಟ್: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕನ್ನಡಪರ, ರೈತ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿದ್ದು, ಬೆಂಗಳೂರಿನ ಹಲವೆಡೆ ಮತ್ತು ಕೋಲಾರ ಮತ್ತು ಕೆಲವು ಜಿಲ್ಲೆಗಳನ್ನು ಹೊರತು ಪಡಿಸಿ ಹಲವೆಡೆ ಮಿಶ್ರ ಪ್ರತಿಕ್ರಿಯೆ ದೊರೆತಿದೆ.
ಈ ಹಿಂದೆ ಕಾವೇರಿ ವಿಚಾರಕ್ಕೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತ್ರತ್ವದಲ್ಲಿ ನಡೆದ ಬಂದ್ ಯಶಸ್ವಿಯಾಗಿತ್ತು ಮತ್ತು ಈ ಪ್ರತಿಭಟನೆಗೆ ವಾಟಾಳ್ ಪೇಟ ಧರಿಸಿ ಕತ್ತೆಯ ಮೇಲೆ ಕುಳಿತು ಕಾಣಿಸಿಕೊಂಡಿದ್ದರು.
ಆದರೆ ಈ ಭಾರೀ ಕಾವೇರಿ ಹೋರಾಟದಲ್ಲಿ ಬುರ್ಖಾ ಧರಿಸಿ ಕಾಲಿ ಬಿಂದಿಗೆ ತಲೆಯ ಮೇಲೆ ಹಿಡಿದು ಬಂದಿರುವುದು ಎಲ್ಲರ ಗಮನ ಸೆಳೆದಿದೆ ಮತ್ತು ವಿವಾದಕ್ಕೆ ಕಾರಣ ಮಾಡಿಕೊಟ್ಟಿದೆ ಎನ್ನಲಾಗಿದೆ ಈ ಬಗ್ಗೆ ಪರ ವಿರೋಧ ಚರ್ಚೆಗಳು ಜೋರಾಗಿದೆ.
ಈ ಬಂದ್ಗೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ವ್ಯಕ್ತಪಡಿಸಿವೆ. ಅಲ್ಲದೇ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಈಗಾಗಲೆ ಪೊಲೀಸರು ಬಂದೋಬಸ್ತ್ಗೆ ಫೀಲ್ಡ್ಗೆ ಇಳಿದಿದ್ದಾರೆ.
ಟೌನ್ಹಾಲ್ ಮುಂದೆ ಪ್ರತಿಭಟನೆಗೆ ಅವಕಾಶ ನೀಡದೆ ದೌರ್ಜನ್ಯವೆಸಗಿದ್ದಾರೆ. ರಾಜ್ಯ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ನಾನು ಕಪ್ಪು ಬಟ್ಟೆ ಧರಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದೇನೆ. ನ್ಯಾಯದೇವತೆ ಧರಿಸುವ ಬಟ್ಟೆ ಅಥವಾ ಬುರ್ಖಾ ಎಂದಾದರೂ ಕರೆಯಲಿ. ನ್ಯಾಯದೇವತೆಯ ಸಂದೇಶ ಸಾರುವ ಬುರ್ಖಾ ಧರಿಸಿದ್ದೇನೆ. ಮಹಿಳೆಯರ ಗೌರವದ ಸಂಕೇತ ಸಾರುವ ಬುರ್ಖಾ ಧರಿಸಿದ್ದೇನೆ. ಕಾವೇರಿ ನದಿ ನೀರು ವಿಚಾರವಾಗಿ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇನೆ ಎಂದು ಹೇಳಿಕೊಂಡಿದ್ದಾರೆ .