ನ್ಯೂಸ್ ನಾಟೌಟ್ : ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರು, ಶಾಲೆಯಿಂದ ಬೈಸಿಕಲ್ ನಲ್ಲಿ ಮನೆಗೆ ಮರಳುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯ ದುಪಟ್ಟಾವನ್ನು ಎಳೆದಿದ್ದರಿಂದ ಆಕೆ ಕೆಳಗೆ ಬಿದ್ದು ಕೊನೆಯುಸಿರೆಳೆದ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿತ್ತು, ಇದಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ಖಡಕ್ ವಾರ್ನಿಂಗ್ ಕೊಟ್ಟಿದ್ದು, ಇಂಥ ಅಪರಾಧ ಮಾಡಿದ್ದು ಗೊತ್ತಾದರೆ ಅವರಿಗೆ ಯಮರಾಜ ಕಾಯುತ್ತಿದ್ದಾನೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಪರಾಧಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಅಂಬೇಡ್ಕರ್ನಗರದಲ್ಲಿ ಮೋಟಾರ್ಸೈಕಲ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಕಿರುಕುಳ ನೀಡುವ ಯತ್ನದಲ್ಲಿ ವಿದ್ಯಾರ್ಥಿನಿಯೊಬ್ಬಳ ‘ದುಪಟ್ಟಾ’ ಎಳೆದಿದ್ದರಿಂದ ಆಕೆ ತನ್ನ ಬೈಸಿಕಲ್ನಿಂದ ಬಿದ್ದಿದ್ದಳು. ಇದರಿಂದಾಗಿ ಆಕೆಯ ಹಿಂದೆಯೇ ಬರುತ್ತಿದ್ದ ಮತ್ತೊಬ್ಬ ಮೋಟಾರ್ಸೈಕ್ಲಿಸ್ಟ್ನಿಂದ ಆಕೆಯ ಮೈಮೇಲೆ ಬೈಕ್ ಹರಿಸಿದ್ದರಿಂದ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಪ್ರಾಣ ಕಳೆದುಕೊಂಡಿದ್ದಳು.
ಈ ಘಟನೆಯ ಬೆನ್ನಲ್ಲಿಯೇ ಯೋಗಿ ಆದಿತ್ಯನಾಥ್ ಈ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಈ ಘಟನೆ ನಡೆದಿದ್ದು, ಕ್ಷಿಪ್ರ ಕಾರ್ಯಾಚರಣೆ ಕೈಗೊಂಡ ಉತ್ತರ ಪ್ರದೇಶಪೊಲೀಸರು ಶನಿವಾರ ರಾತ್ರಿಯ ವೇಳೆಗೆ ಮೂವರೂ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಇಬ್ಬರು ಆರೋಪಿಗಳಿಗೆ ಬುಲೆಟ್ ಗಾಯಗಳಾಗಿದ್ದಾರೆ, ಭಾನುವಾರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಒಬ್ಬ ವ್ಯಕ್ತಿಯ ಕಾಲು ಮುರಿದು ಹೋಗಿದೆ ಎಂದು ತಿಳಿಸಿದ್ದಾರೆ. “ಈ ವೇದಿಕೆಯಿಂದ ಎಲ್ಲರಿಗೂ ಒಂದು ಎಚ್ಚರಿಕೆ ನೀಡಲು ಬಯಸುತ್ತೇನೆ. ಮಹಿಳೆಯರಿಗೆ ಕಿರುಕುಳ ನೀಡುವಂಥ ಅಪರಾಧ ಕೃತ್ಯ ಎಸಗಿದರೆ, ಅವರಿಗಾಗಿ ದೇವರು ಯಮರಾಜ ಕಾಯ್ತಾ ಇರ್ತಾನೆ ಎಂದು ಎಚ್ಚರಿಸಲು ಬಯಸುತ್ತೇನೆ” ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಈ ಹಿಂದೆ ಹಲವು ಇಂತಹ ಪ್ರಕರಣಗಳಿಗೆ ಯೋಗಿ ಆದಿತ್ಯನಾಥ್ ಕೊಡಿಸಿದ ಶಿಕ್ಷೆಯಿಂದಲೇ ಅವರ ಆಡಳಿತಗಳು ಹಲವು ರಾಜ್ಯಗಳಲ್ಲಿ ಮಾದರಿಯಾಗಿದೆ ಎನ್ನಲಾಗಿದೆ.