ನ್ಯೂಸ್ನಾಟೌಟ್: ಸ್ವಚ್ಛತೆಯನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಆರೋಗ್ಯಯುತ ಜೀವನ ನಡೆಸಬಹುದು. ಈ ನಿಟ್ಟಿನಲ್ಲಿ ಸ್ವಚ್ಛಭಾರತವನ್ನಾಗಿ ಮಾಡುವ ಪ್ರಧಾನಿ ನರೇಂದ್ರ ಮೋದಿಯವರ ಕಲ್ಪನೆಗೆ ನಾವೆಲ್ಲ ಕೈಜೋಡಿಸಿಬೇಕಿದೆ. ಸುಳ್ಯದಲ್ಲಿ ಕೆ.ವಿ.ಜಿ ಸಂಸ್ಥೆಯ ವತಿಯಿಂದ ಕೈಗೊಂಡ ಸ್ವಚ್ಛತಾ ಅಭಿಯಾನ ಇತರರಿಗೂ ಮಾದರಿಯಾಗಲಿ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಸುಳ್ಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಆಯೋಜಿಸಿದ ಸ್ವಚ್ಛತಾ ಅಭಿಯಾನ ಮತ್ತು ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸುಳ್ಯ ಎಸ್.ಐ. ಈರಯ್ಯ ದೂಂತೂರು ಮಾತನಾಡಿ, ಈ ಕಾರ್ಯಕ್ರಮವನ್ನು ಕಂಡಾಗ ತಮ್ಮ ಕಾಲೇಜು ಜೀವನದಲ್ಲಿ ಆಯೋಜಿಸಿದ ಕಾರ್ಯಕ್ರಮಗಳು ನೆನಪಿಗೆ ಬರುತ್ತವೆ. ಇಂಥ ಸ್ವಚ್ಛತಾ ಅಭಿಯಾನ ಎಲ್ಲಾ ಕಡೆ ನಡೆಯಬೇಕು. ಆಗ ಮಾತ್ರ ರೋಗಮುಕ್ತ ಸಮಾಜ ನಿರ್ಮಾಣ ಸಾಧ್ಯ. ಇದಕ್ಕೆ ಎಲ್ಲರೂ ಕೈಜೋಡಿಸಬೇಕಿದೆ ಎಂದರು.
ಸುಳ್ಯ ನಗರಪಂಚಾಯತ್ ಇಒ ಸುಧಾಕರ್ ಮಾತನಾಡಿ, ಸ್ವಚ್ಛತಾ ಕಾರ್ಯದ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ವಹಿಸಬೇಕು. ಇದಕ್ಕೆ ಪೋಷಕರು ಮತ್ತು ಸಾರ್ವಜನಿಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು ಎಂದರು.
ಸುಳ್ಯ ನಗರಪಂಚಾಯತ್ ಮಾಜಿ ಅಧ್ಯಕ್ಷ ವಿನಯಕುಮಾರ ಕಂದಡ್ಕ ಮಾತನಾಡಿ, ಭಾರವನ್ನು ಪ್ಲಾಸ್ಟಿಕ್ ಮುಕ್ತ ದೇಶವನ್ನಾಗಿ ಮಾಡಬೇಕು. ನರೇಂದ್ರ ಮೋದಿಯವರ ಸ್ವಚ್ಛ ಭಾರತ ಕನಸನ್ನು ನನಸಾಗಿಸಲು ನಾವೆಲ್ಲ ಕೈಜೋಡಿಸಬೇಕಿದೆ ಎಂದರು.
ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಡಿ.ವಿ. ಲೀಲಾಧರ್, ಕೆ.ವಿ.ಜಿ. ಸರ್ಜರಿ ವಿಭಾಗದ ಎಚ್ಒಡಿ ಡಾ.ಬಾಲಕೃಷ್ಣ, ಮೆಡಿಸಿನ್ ವಿಭಾಗದ ಎಚ್ಒಡಿ ಡಾ. ದಿನೇಶ್, ಕೆವಿಜಿ ಫಿನಾನ್ಶಿಯಲ್ ಎಚ್ಒಡಿ ಧನಂಜಯ, ಕೆವಿಜಿ ಎಮರ್ಜೆನ್ಸಿ ಎಚ್ಒಡಿ ಲೂಯಿಸ್, ಮೆಡಿಕಲ್ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿಗಳು, ಸಿಬ್ಬಂದಿ, ಸಾರ್ವಜನಿಕರು, ನಗರಪಂಚಾಯತ್ ಸ್ವಚ್ಛತಾ ಸಿಬ್ಬಂದಿ ಪಾಲ್ಗೊಂಡಿದ್ದರು.