ನ್ಯೂಸ್ ನಾಟೌಟ್ : ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಪುಣಚದಿಂದ ವರದಿಯಾಗಿದೆ.ಯುವಕ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಪುಣಚ ಚೆಕ್ಕುತ್ತಿ ನಿವಾಸಿ ಶ್ರೀ ಕೃಷ್ಣ (26ವ) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದು ಬಂದಿದೆ.ಯುವಕ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.ಮೃತರು ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.