ಬೆಳ್ತಂಗಡಿ: ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಎಫ್ ಐ ಆರ್, ಸಿಎಂ ಸಿದ್ದರಾಮಯ್ಯ ನಾಮಫಲಕ ತಿರುಚಿದ್ದು ಹೇಗೆ? ಏನಿದು ಪ್ರಕರಣ?

ನ್ಯೂಸ್ ನಾಟೌಟ್: ಕಳೆಂಜದ ಮೀಸಲು ಅರಣ್ಯ ಪ್ರದೇಶದ ಜಾಗ ಒತ್ತುವರಿ ಮಾಡಿ ನಿರ್ಮಿಸುತ್ತಿದ್ದ ಮನೆಯನ್ನು ತೆರವುಗೊಳಿಸಲು ತೆರಳಿದ್ದ ಉಪ್ಪಿನಂಗಡಿ ಅರಣ್ಯಾಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿರುವ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಈಗ ಮತ್ತೊಂದು ಎಫ್.ಐ.ಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ಹೆಸರಿನ ಎದುರು CHIEF MINISTER ಬದಲಿಗೆ COLLECTION MASTER ಎಂದು ನಾಮಫಲಕ ಇರುವ ಫೋಟೊವನ್ನು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು,ಶಾಸಕ ಹರೀಶ್ ಪೂಂಜಾ ಹೆಸರಿನ ಫೇಸ್ ಬುಕ್ ಪೇಜ್ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ. ಸಿಎಂ ಕಚೇರಿ ಹಾಗೂ ಗೃಹಕಚೇರಿ ಕಾವೇರಿ ನಿವಾಸದ ಗೇಟ್ ನಲ್ಲೂ ಅದೇ ರೀತಿ ಎಡಿಟ್ ಮಾಡಿದ ಫೋಟೊ ಫೇಸ್ ಬುಕ್ ನಲ್ಲಿ ಹಾಕಲಾಗಿದ್ದು, ಸಿಎಂ ಸಿದ್ದರಾಮಯ್ಯ ಫೋಟೊ ಎಡಿಟ್ ಮಾಡಿ ವೈರಲ್ ಮಾಡಿದ್ದಕ್ಕೆ IPC ಸಕ್ಷನ್ 1869 U/S 504, 505(2) ಅಡಿ ದೂರು ದಾಖಲಾಗಿದ್ದು, ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೆಡಿ ನೀಡಿದ್ದ ದೂರಿನ ಆಧಾರದಲ್ಲಿ ಪೊಲೀಸರು ಕಾರ್ಯಾಚರಣೆ ಮಾಡಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.