ನ್ಯೂಸ್ ನಾಟೌಟ್ : ಇತ್ತೀಚೆಗೆ ಮಿಸ್ಸಿಂಗ್ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ನಡೆದಿದೆ.
ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ವಿನಿತಾ (22) ಅ.9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಅಕ್ಕನಲ್ಲಿ ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ತನ್ನ ಮನೆಯಿಂದ ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ.ಈಕೆ ಬಿ.ಕಾಂ. ಪದವೀಧರೆಯಾಗಿದ್ದು, ಈಕೆ ಪ್ರಸ್ತುತ ಉಡುಪಿ ಎಂಜಿಎಂ ಕಾಲೇಜ್ ಬಳಿಯ ಎಲೆಕ್ಟ್ರಿಕಲ್ ಬೈಕ್ ಶೋರೂಂನಲ್ಲಿ ಸುಮಾರು 4 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ.
ಒಂದು ವಾರದ ಹಿಂದೆ ಕೆಲಸಬಿಟ್ಟಿದ್ದರು.ಆಕೆ ಉಪಯೋಗಿಸುತ್ತಿದ್ದ ಮೊಬೈಲ್ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿದೆ.ಈ ಬಗ್ಗೆ ಆಕೆಯ ಸ್ನೇಹಿತರಲ್ಲಿ,ಸಂಬಂಧಿಕರ ಮನೆಯಲ್ಲಿ, ಆಸುಪಾಸಿನಲ್ಲಿ ಹುಡುಕಾಡಿದರೂ ಯಾವುದೇ ಸುಳಿವು ಲಭ್ಯವಾಗಿಲ್ಲ ಎಂದು ಎಂದು ಸಹೋದರ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.