ನ್ಯೂಸ್ ನಾಟೌಟ್: ಲೋಕಾಯುಕ್ತ ಅಧಿಕಾರಿಗಳು ಮಂಗಳೂರಿನಲ್ಲಿ ಮಿಂಚಿನ ದಾಳಿ ನಡೆಸಿದ್ದಾರೆ.
ಬುಧವಾರ ನಡೆಸಿದ ದಾಳಿಯ ವೇಳೆ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಗುಣಮಟ್ಟ ಭರವಸೆ ವಿಭಾಗದ ಸಹಾಯಕ ಇಂಜಿನಿಯರ್ ರೊನಾಲ್ಡ್ ಲೋಬೋ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ರೊನಾಲ್ಡ್ ಲೋಬೋ ಎಂದು ಗುರುತಿಸಲಾಗಿದೆ. ರೊನಾಲ್ಡ್ ಲೋಬೋ ಬಿಲ್ ಪಾಸ್ ಮಾಡಲು ಲಂಚದ ಬೇಡಿಕೆ ಇಟ್ಟಿದ್ದ ಎಂದು ಹೇಳಲಾಗಿದೆ. ರಸ್ತೆ ಕಾಮಗಾರಿಯ ಬಿಲ್ ಪಾಸ್ ಮಾಡಲು ರೊನಾಲ್ಡ್ ಲೋಬೋ ಲಂಚದ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಲೋಕಾಯುಕ್ತ ಎಸ್ ಪಿ ಸೈಮನ್ ಹಾಗು ಡಿ ವೈ ಎಸ್ ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.