ನ್ಯೂಸ್ನಾಟೌಟ್: ಚಿಕ್ಕೋಡಿಯಲ್ಲಿ ತುಂಬಿದ ಸಭೆಯಲ್ಲಿ ನರ್ಸ್ಗಳ (Nurse) ಸೌಂದರ್ಯದ ಬಗ್ಗೆ ಮಾತನಾಡಿ ಕೈ ಶಾಸಕ ರಾಜು ಕಾಗೆ ಪೇಚಿಗೆ ಸಿಲುಕಿದ ಘಟನೆ ನಡೆದಿದೆ.
ಬೆಳಗಾವಿ (Belagavi) ಜಿಲ್ಲೆ ಅಥಣಿ ತಾಲೂಕಿನ ಅವರಖೋಡ ಗ್ರಾಮದಲ್ಲಿ ದಸರಾ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ವರ್ಷ 70 ಆದರೂ ತಮ್ಮ ಮಾನಸಿಕತೆಯನ್ನು ಕಾಂಗ್ರೆಸ್ ಶಾಸಕ ಪ್ರದರ್ಶನ ಮಾಡಿದ್ದಾರೆ. ಶಾಸಕ ರಾಜು ಕಾಗೆ ನರ್ಸ್ಗಳ ಸೌಂದರ್ಯದ ಬಗ್ಗೆ ಮಾತನಾಡಿದ್ದು, ಲಿವರ್ ಟ್ರಾನ್ಸ್ಪ್ಲಾಂಟ್ ಆದಾಗ ಒಂದು ತಿಂಗಳು ಆಸ್ಪತ್ರೆಯಲ್ಲಿದ್ದೆ ಎಂದರು.
ಈ ವೇಳೆ ವೈದ್ಯರು ದಿನವೂ ಬಂದು ಹೇಗಿದ್ದೀರಿ ಅಂತಾ ಕೇಳೋರು. ಆಗ ಆಸ್ಪತ್ರೆಯಲ್ಲಿ ಇದ್ದ ಡಾಕ್ಟರ್ಗೆ ನಾನು ಹೇಳಿದ್ದೆ. ನನ್ನ ಆರೋಗ್ಯಕ್ಕೆ ಏನು ಆಗಿಲ್ಲ ರೀ. ನನ್ನ ಆಪರೇಷನ್ ಸಕ್ಸಸ್ ಮಾಡಿದ್ದೀರಿ, ಎಲ್ಲಾ ಆಗಿದೆ.
ಆದರೆ ನಿಮ್ಮಲ್ಲಿ ನರ್ಸ್ಗಳು ಚೆಂದ ಚೆಂದ ಹುಡುಗಿಯರು ಇದ್ದಾರೆ. ಅವರು ನನಗೆ ಅಜ್ಜ ಅನ್ನುತ್ತಿದ್ದಾರೆ. ಅದು ನನಗೆ ಮಾನಸಿಕ ಎಂಬಂತೆ ಆಗಿದೆ ಎಂದಿದ್ದೆ ಎಂಬ ಹೇಳಿಕೆ ಈಗ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ.
ರಾಜು ಕಾಗೆ ಭಾಷಣಕ್ಕೆ ಸಭೆಯಲ್ಲಿ ನೆರೆದಿದ್ದ ಜನ ಕೇಕೆ ಹಾಕಿದ್ದಾರೆ. ವೇದಿಕೆಯಲ್ಲಿದ್ದ ಲಕ್ಷ್ಮಣ ಸವದಿ ಉದ್ದೇಶಿಸಿ ಕಾಂಗ್ರೆಸ್ ಶಾಸಕ ರಾಜು ಕಾಗೆ ಈ ಮಾತುಗಳನ್ನ ಆಡಿದ್ದಾರೆ ಎಂದು ಮೂಲಗಳು ತಿಳಿಸಿದೆ.