ನ್ಯೂಸ್ ನಾಟೌಟ್: ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ ಆರೋಪದ ಮೇಲೆ ಶಾಲೆಯ ಮುಖ್ಯಶಿಕ್ಷಕನ್ನು (Teacher) ಡಿಡಿಪಿಐ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಚಿತ್ರದುರ್ಗ ಜೋಡಿಚಿಕ್ಕೇನಹಳ್ಳಿಯ ಸರ್ಕಾರಿ ಪ್ರಾಥಾಮಿಕ ಶಾಲೆಯಲ್ಲಿ ಅ.25 ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ.ಶಾಲಾ ಶೌಚಾಲಯ ಸ್ವಚ್ಛಗೊಳಿಸಲು ವಿದ್ಯಾರ್ಥಿಗಳನ್ನು ಬಳಸಿಕೊಂಡಿದ್ದರು. ಈ ವೇಳೆ 2ನೇ ತರಗತಿ ವಿದ್ಯಾರ್ಥಿನಿ ಒಬ್ಬಳ ಮೇಲೆ ಮುಖ್ಯಶಿಕ್ಷಕ ರಂಗಸ್ವಾಮಿ ಆ್ಯಸಿಡ್ ಎರಚಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಈ ಘಟನೆಯಿಂದಾಗಿ ಬಾಲಕಿಯ ಬೆನ್ನಿಗೆ ಗಾಯವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾಳೆ.ಈ ಸಂಬಂಧ ಪೋಷಕರು ಹಾಗೂ ಗ್ರಾಮಸ್ಥರು ಮುಖ್ಯ ಶಿಕ್ಷಕನ ವಿರುದ್ಧ ಆಕ್ರೋಶ ಹೊರಹಾಕಿದ್ದರು.
ಇದರ ಬೆನ್ನಲ್ಲೇ ಎಚ್ಚೆತ್ತ ಡಿಡಿಪಿಐ ರವಿಶಂಕರ್ ರೆಡ್ಡಿಯವರು ಮುಖ್ಯಶಿಕ್ಷಕನನ್ನು ಅಮಾನತುಗೊಳಿಸಿದ್ದಾರೆ.ಈ ಸಂಬಂಧ ಶಾಲೆಯ ಮುಖ್ಯಶಿಕ್ಷಕ ರಂಗಸ್ವಾಮಿ ವಿರುದ್ಧ ಗ್ರಾಮಾಂತರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ತನ್ನ ಜೀವನವನ್ನೇ ಕತ್ತಲನ್ನಾಗಿಸಿದ ಸುಳ್ಯದ ಮಹಿಳೆ,ಉದ್ಯಮಿಯೊಬ್ಬರ ಪತ್ನಿಯ ಈ ನಿರ್ಧಾರಕ್ಕೆ ಕಾರಣವೇನು?