ನ್ಯೂಸ್ ನಾಟೌಟ್ : ದಸರಾ ಹಬ್ಬ ಮುಗಿಯುವುದರೊಳಗೆ ಬಿಜೆಪಿ ರಾಜ್ಯಾಧ್ಯಕ್ಷರ(Karnataka BJP President) ನೇಮಕವಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.ಈ ಹಿನ್ನಲೆಯಲ್ಲಿ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಅವರಿಗೆ ಕಟ್ಟಲು ಹೈಕಮಾಂಡ್ ತೀರ್ಮಾನಿಸಿದೆ ಎಂಬದರ ಬಗ್ಗೆ ಬಾರಿ ಚರ್ಚೆಗಳು ನಡಿತಿವೆ.ಹಾಗಾದರೆ ಮುಂದಿನ ದಿನಗಳಲ್ಲಿ ಶೋಭಾ ಕರಂದ್ಲಾಜೆಯವರೇ ರಾಜ್ಯ ಬಿಜೆಪಿ ಚುಕ್ಕಾಣಿ ಹಿಡಿಯುತ್ತಾರೆಯೇ ಎನ್ನುವ ಪ್ರಶ್ನೆಗಳು ದಟ್ಟವಾಗಿವೆ.
ಬಿಜೆಪಿ ರಾಜ್ಯಧ್ಯಾಕ್ಷ ಸ್ಥಾನದ ಬಗ್ಗೆ ಸಚಿವೆ ಶೋಭಾ ಕರಂದ್ಲಾಜೆ ಮೈಸೂರಲ್ಲಿ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಶೋಭಾ ಕರಂದ್ಲಾಜೆ, ‘ನನಗೆ ರಾಜ್ಯಧ್ಯಕ್ಷ ಸ್ಥಾನ ಸಿಗಲ್ಲ ಎಂದಿದ್ದಾರೆ. ರಾಜ್ಯಧ್ಯಕ್ಷ ಸ್ಥಾನದ ಬಗ್ಗೆ ಕೇವಲ ಊಹಾ-ಪೋಹ ಸುದ್ದಿಗಳಷ್ಟೇ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದ ಮಾತು.ನನಗೆ ಈ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದಿದ್ದಾರೆ. ನಾನು ಕೇಂದ್ರದಲ್ಲಿ ಮಂತ್ರಿ ಇರೋದ್ರಿಂದ ನನಗೆ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸುವ ಚರ್ಚೆ ಇಲ್ಲ ಎಂದಿದ್ದಾರೆ.
ಈ ಮಧ್ಯೆ ಶೋಭಾ ಕರಂದ್ಲಾಜೆಗೆ ಕೇಂದ್ರ ಸಚಿವ ಅಮಿತ್ ಶಾ ಕರೆ ಮಾಡಿದ್ದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಶೋಭಾಗೆ ಅಮಿತ್ ಶಾ ಶುಭಾಶಯ ಕೋರಿದ್ದಾರೆ.ಇದೀಗ ರಾಜ್ಯಾಧ್ಯಕ್ಷ ಸ್ಥಾನದ ಕುರಿತು ಚರ್ಚೆಯಲ್ಲಿರುವಾಗಲೇ ಅಮಿತ್ ಶಾ ಕರೆ ಮಾಡಿರೋದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.