ನ್ಯೂಸ್ ನಾಟೌಟ್: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡುವಿನ ರಾಜಕೀಯ ಗುದ್ದಾಟ ಮುಂದುವರಿದಿದೆ. ಜಾರಕಿಹೊಳಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಡಿಕೆಶಿ ವಿರುದ್ಧ ಏಕವಚನದಲ್ಲಿ ಮಾತನಾಡಿದ ಬಳಿಕ ಡಿಸಿಎಂ ಡಿಕೆಶಿ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ.
ಈ ಸಂಬಂಧ ಸೋಮವಾರ ತಡರಾತ್ರಿ ರಮೇಶ್ ಜಾರಕಿಹೊಳಿ ಬೆಂಗಳೂರಿನ ನಿವಾಸದ ಮುಂದೆ ಪೋಸ್ಟರ್ ಗಳನ್ನು ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.
ಡಿಕೆ ಶಿವಕುಮಾರ್ ಒಬ್ಬ ಪುಕ್ಕಲ, ಮೋಸಗಾರ, ಸಿಡಿ ಮಾಸ್ಟರ್ ಎಂದೆಲ್ಲಾ ರಮೇಶ್ ಜಾರಕಿಹೊಳಿ ಸೋಮವಾರ ಹೇಳಿದ್ದರು.
ಇದರಿಂದ ಸಿಟ್ಟಿಗೆದ್ದ ಅಭಿಮಾನಿಗಳು, ಜಾರಕಿಹೊಳಿಯ ಸದಾಶಿವ ನಗರದ ಮನೆಯ ಗೋಡೆಗಳಿಗೆ ಅವಾಚ್ಯ ಶಬ್ದಗಳ ಬರಹವಿರುವ ಪೋಸ್ಟರ್ ಗಳನ್ನು ಅಂಟಿಸಿದ್ದಾರೆ.
ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಪೋಸ್ಟರ್ ಗಳನ್ನು ತೆರವುಗೊಳಿಸಿದ್ದಾರೆ. ಶೇಷಾದ್ರಿಪುರ ಉಪವಿಭಾಗದ ಎಸಿಪಿ ಅವರು ಸ್ಥಳಕ್ಕೆ ಭೇಟಿ ನೀಡಿ, ಜಾರಕಿಹೊಳಿ ನಿವಾಸಕ್ಕೆ ಭದ್ರತೆ ಕಲ್ಪಿಸಿದ್ದಾರೆ ಎಂದು ವರದಿ ತಿಳಿಸಿದೆ.