ನ್ಯೂಸ್ ನಾಟೌಟ್: ತಾಯಿಯ ಮೇಲೆ ಅತ್ಯಾಚಾರವೆಸಗಲು ಯತ್ನಿಸಿ, ತಾಯಿ ವಿರೋಧಿಸಿದಾಗ ಆಕೆಯ ಕತ್ತು ಹಿಸುಕಿ ಕೊಂದು ಹಾಕಿದ ವಿಕೃತ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ತಾಲೂಕಿನ ಕೊಂಡೇಲಾ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ದುರ್ಗಾನಗರ ನಿವಾಸಿ ರತ್ನ ಶೆಟ್ಟಿ(62) ಎಂದು ಗುರುತಿಸಲಾಗಿದೆ. ಅಕ್ಟೋಬರ್ 26 ರಂದು ರಾತ್ರಿ ಘಟನೆ ನಡೆದಿದ್ದು, ಮೂರು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಪುತ್ರ ರವಿರಾಜ್ ಶೆಟ್ಟಿಯನ್ನು ಬಜ್ಪೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ತಾಯಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದಾಗ ಆಕೆ ಒಪ್ಪಲಿಲ್ಲ. ಆದ ಕಾರಣ ಕೊಂದಿದ್ದಾಗಿ ಆರೋಪಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.
ತಾಯಿಯನ್ನು ಕೊಂದ ಬಳಿಕ ಆರೋಪಿ ಪುತ್ರ ಮನೆಗೆ ಬೀಗ ಹಾಕಿ ಪರಾರಿಯಾಗಿದ್ದ. ಮೂರು ದಿನಗಳ ಬಳಿಕ ನೊಣಗಳು ಮುತ್ತಿಕೊಂಡ ಕಾರಣ ಘಟನೆ ಬೆಳಕಿಗೆ ಬಂದಿದೆ. ಬಜ್ಪೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.