ನ್ಯೂಸ್ ನಾಟೌಟ್ :ವೃಕ್ಷ ಮಾತೆ, ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಸಂಬಂಧ ಸಾಲುಮರದ ತಿಮ್ಮಕ್ಕನ ದತ್ತು ಪುತ್ರ ಉಮೇಶ್ ವಿಡಿಯೊ ಹಂಚಿಕೊಂಡು ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ಸರ್ಕಾರದ ಪರಿಸರ ರಾಯಭಾರಿಯಾಗಿರುವ ಪದ್ಮ ಶ್ರೀ ಸಾಲು ಮರದ ತಿಮ್ಮಕ್ಕ ಮೂರು ತಿಂಗಳ ಹಿಂದೆ ಅವರು ಬೆಂಗಳೂರಿನ ತಮ್ಮ ಮನೆಯಲ್ಲಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದಿದ್ದರು. ನಂತರ ಬೇಲೂರು ಸಮೀಪದ ಬಳ್ಳೂರಿನಲ್ಲಿರುವ ಉಮೇಶ್ ಅವರ ಮನೆಗೆ ತೆರಳಿದ್ದರು ಎನ್ನಲಾಗಿದೆ.
ಈ ವಿಡಿಯೊ ಊಹಾಪೋಹಗಳಿಗೆ ತೆರೆ ಎಳೆದಿದ್ದು, ಸೆಪ್ಟೆಂಬರ್ 26ರಂದು ಅವರ ಉಸಿರಾಟದಲ್ಲಿ ಏರುಪೇರಾಗಿದ್ದರಿಂದ ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
ಸೋಮವಾರ ರಾತ್ರಿಯಿಂದ ಉಸಿರಾಟದಲ್ಲಿ ತೀವ್ರ ಏರು ಪೇರಾಗಿದ್ದರಿಂದ ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿತ್ತು, ಚಿಕಿತ್ಸೆ ನೀಡಲಾಗುತ್ತಿದೆ.