ನ್ಯೂಸ್ ನಾಟೌಟ್ : ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಬ್ರಹ್ಮಣ್ಯ ಸಮೀಪದ ಗುತ್ತಿಗಾರು ಬಳಿ ನಡೆದಿದೆ.ಪ್ರೇಮಾ(೫೫) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದು ಬಂದಿದೆ.
ಅ.1 ರ ಸಂಜೆ ಈ ಘಟನೆ ವರದಿಯಾಗಿದೆ.ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ.ಮೃತ ಪ್ರೇಮಾ ಅವರು ಪತಿ ಗುತ್ತಿಗಾರಿನ ವಳಲಂಬೆಯ ಲಕ್ಷ್ಮಣ ಆಚಾರ್ಯ, ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿರುವುದಾಗಿ ತಿಳಿದು ಬಂದಿದೆ.