ನ್ಯೂಸ್ ನಾಟೌಟ್: ಸುಳ್ಯದಂತಹ ಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗಿ ತರಬೇತಿ ನೀಡುವ ಸಂಸ್ಥೆಯ ಅಗತ್ಯವಿತ್ತು. ಈ ನಿಟ್ಟಿನಲ್ಲಿ ಪುತ್ತೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡಿ ನೂರಾರು ವಿದ್ಯಾರ್ಥಿಗಳಿಗೆ ಸರಕಾರಿ ಹುದ್ದೆ ಲಭಿಸುವಂತೆ ಮಾಡಿದ ವಿದ್ಯಾಮಾತಾ ಅಕಾಡೆಮಿ ಸುಳ್ಯದಲ್ಲಿಯೂ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿರುವುದು ಹೆಮ್ಮೆಯ ವಿಚಾರ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲ್ ಹೇಳಿದರು.
ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯಲ್ಲಿಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪೂರ್ವ ತಯಾರಿ ಮತ್ತು ಖಾಸಗಿ ಉದ್ಯೋಗಗಳ ನೇರ ಸಂದರ್ಶನ ಪೂರ್ವ ತಯಾರಿ ಬಗೆಗಿನ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸುಳ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವವರ ಸಂಖ್ಯೆ ತೀರಾ ವಿರಳ. ಈ ನಿಟ್ಟಿನಲ್ಲಿ ವಿದ್ಯಾಮಾತಾ ಅಕಾಡೆಮಿಯು ಈ ಭಾಗದ ವಿದ್ಯಾರ್ಥಿಗಳಿಗೆ ನೆರವಾಗಲಿದೆ. ಈ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಚಂದ್ರಶೇಖರ ಪೇರಾಲ್ ತಿಳಿಸಿದರು.
ವಿದ್ಯಾಮಾತಾ ಅಕಾಡೆಮಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಚಂದ್ರಾವತಿ ಬಡ್ಡಡ್ಕ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆಗೆ ಉದ್ಯೋಗಗಳಿಗೆ ಸಂಬಂಧಿಸಿದ ವೃತ್ತಿಪರ ತರಬೇತಿಯ ಅಗತ್ಯವಿದೆ ಎಂದರು.
ವಿದ್ಯಾಮಾತಾ ಅಕಾಡೆಮಿಯ ಅಧ್ಯಕ್ಷ ಭಾಗ್ಯೇಶ್ ರೈ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾಮಾತಾ ಅಕಾಡೆಮಿಯ ವತಿಯಿಂದ ಚಂದ್ರಶೇಖರ್ ಪೇರಾಲ್ ಅವರನ್ನು ಸನ್ಮಾನಿಸಲಾಯಿತು. IAS, KAS, Banking ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿಯ ಬಗ್ಗೆಖ್ಯಾತ ಲೇಖಕ, ವಿದ್ಯಾಮಾತಾ ಅಕಾಡೆಮಿಯ ಗೌರವ ತರಬೇತುದಾರ ಅರವಿಂದ ಚೊಕ್ಕಾಡಿ ನಡೆಸಿಕೊಟ್ಟರು. ತರಬೇತುದಾರರಾದ ಡಾ. ಚೈತ್ರ, ಹರ್ಷಿತಾ ಆಚಾರ್ಯ, ಚಂದ್ರಕಾಂತ್ ಗೌಡ ಸ್ಪರ್ಧಾತ್ಮಕ ಪರೀಕ್ಷೆಗಳ, ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಪಡೆಯಲು ಬೇಕಾಗಿರುವ ಉದ್ಯೋಗ ಕೌಶಲ್ತೆಗಳ ಬಗ್ಗೆ ಮಾಹಿತಿ ನೀಡಿದರು. ಸುಳ್ಯ ಶಾಖೆಯ ಕಚೇರಿ ಸಹಾಯಕಿ ಪೂರ್ಣಶ್ರೀ ಗೌಡ ಸಹಕರಿಸಿದರು.