ನ್ಯೂಸ್ ನಾಟೌಟ್: 1753ನೇ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಖಾವಂದರಾದ ಡಾ ಡಿ. ವೀರೇಂದ್ರ ಹೆಗ್ಗಡೆ ಬುಧವಾರ ಬಿಡುಗಡೆಗೊಳಿಸಿದರು.
ಅಖಿಲ ಕರ್ನಾಟಕ ಜನಜಾಗೃತಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಎನ್.ಎ. ರಾಮಚಂದ್ರ, ತಾಲೂಕು ಅಧ್ಯಕ್ಷ ಲೋಕನಾಥ್ ಅಮೆಚೂರು, ತಾಲೂಕು ನಿಕಟಪೂರ್ವಾಧ್ಯಕ್ಷ ಮಹೇಶ್ ಕುಮಾರ್ ಮೇನಾಲ, ಪ್ರಗತಿಬಂಧು ಸ್ವಸಹಾಯ ಸಂಘಗಳ ತಾಲೂಕು ಅಧ್ಯಕ್ಷ ಸುರೇಶ್ ಕಣೆಮರಡ್ಕ, ಪೂರ್ವಾಧ್ಯಕ್ಷ ಬೂಡು ರಾಧಾಕೃಷ್ಣ ರೈ, ಮದ್ಯವರ್ಜನ ಸಮಿತಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಿವಪ್ರಕಾಶ್ ಅಡ್ಪಂಗಾಯ, ತಾಲೂಕು ಯೋಜನಾಧಿಕಾರಿ ನಾಗೇಶ್ ಪಿ, ವಲಯ ಮೇಲ್ವಿಚಾರಕ ಶ್ರೀಮತಿ ವಿಶಾಲ ಕೆ, ಮದ್ಯವರ್ಜನ ಸಮಿತಿ ಉಪಾಧ್ಯಕ್ಷ ಶಶ್ಮಿ ಭಟ್ ಉಪಸ್ಥಿತರಿದ್ದರು.