ನ್ಯೂಸ್ ನಾಟೌಟ್: ರಾಜ್ಯ ಸರ್ಕಾರವು ಶಕ್ತಿ ಯೋಜನೆ Shakti Yojana) ಜಾರಿ ಮಾಡಿದ ಬಳಿಕ ಹಲವು ಸ್ವಾರಸ್ಯಕರ ಘಟನೆಗಳು ಮತ್ತು ಕೆಲವು ದುರುಪಯೋಗಗಳು ಕೇಳಿಬರುತ್ತಿವೆ. ಕಂಡಕ್ಟರ್ಗಳು ಮಹಿಳಾ ಪ್ರಯಾಣಿಕರಿಗೆ ನೀಡಿದ ಟಿಕೆಟ್ ಸಂಖ್ಯೆಗಳನ್ನು ನಿಗಮಗಳಿಗೆ ತಪ್ಪಾಗಿ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಈ ನಡುವೆ ಇಲ್ಲೊಂದು ಘಟನೆ ಅದಕ್ಕೆ ಪುಷ್ಟಿ ನೀಡುವಂತಿದೆ.
ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ (Government Buses) ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಸರ್ಕಾರಿ ಬಸ್ಗಳಲ್ಲಿ ನಿರ್ವಾಹಕರು ಮಹಿಳೆಯರಿಗೆ ಫ್ರೀ ಟಿಕೆಟ್ ನೀಡುತ್ತಿದ್ದು, ಈ ಟಿಕೆಟ್ನ ಹಣವನ್ನು ಸರ್ಕಾರ ನಿಗಮಗಳಿಗೆ ನೀಡುತ್ತದೆ.
ಕಳೆದ ಒಂದು ವಾರದಲ್ಲಿ ಅಂದರೆ ಅ.11 ರಿಂದ ಅ.14ರವರೆಗೆ ನಾಲ್ಕು ನಿಗಮದ ಬಸ್ಗಳಲ್ಲಿ 77,56,72,604 ಮಹಿಳೆಯರು ಸಂಚರಿಸಿದ್ದಾರೆ. ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ 1808,45,54, 754 ಆಗಿದೆ.
ಇನ್ನು ಹೆಚ್ಚಿನ ಇನ್ಷೆಂಟಿವ್ ಆಸೆಗೆ ಬಿಎಂಟಿಸಿ ಕಂಡೆಕ್ಟರೊಬ್ಬ ಬೇಕಾ ಬಿಟ್ಟಿಯಾಗಿ ಫ್ರೀ ಟಿಕೆಟ್ಗಳನ್ನು ಹರಿಯುತ್ತಿರುವ ವೇಳೆ ಸಿಕ್ಕಿಬಿದ್ದಾರೆ. ಮೆಜೆಸ್ಟಿಕ್ನಿಂದ – ತಾವರಕೆರೆಗೆ ಹೋಗುವ (242-ಬಿ) ಬಿಬಿಎಂಟಿಸಿ ಬಸ್ನ ಕಂಡೆಕ್ಟರ್ ನಿನ್ನೆ (ಅ.15) ರಂದು ಸುಖಾಸುಮ್ಮನೇ ಫ್ರೀ ಟಿಕೆಟ್ ಹರಿದು ಬಿಸಾಕುತ್ತಿದ್ದನು.
ಇದನ್ನು ಕಂಡ ಮಹಿಳಾ ಪ್ರಯಾಣಿಕರೊಬ್ಬರು “ಯಾಕೆ ಟಿಕೆಟ್ ಹರಿದು ಬಿಸಾಕುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ ನಿಮ್ಮಂತವರಿಂದಲೇ ಶಕ್ತಿ ಯೋಜನೆಗೆ ಕೆಟ್ಟ ಹೆಸರೆಂದು” ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.