ನ್ಯೂಸ್ ನಾಟೌಟ್: ಉಡುಪಿಯಲ್ಲಿ ನಡೆದ ವಿಶ್ವ ಬಂಟರ ಕ್ರೀಡಾಕೂಟದಲ್ಲಿ ಸುಳ್ಯ ಬಂಟರ ಸಂಘ ಅತ್ಯುತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದೆ. ದೇವಿ ಪ್ರಸಾದ್ ರೈ 200 ಮೀ. ಓಟದಲ್ಲಿ ಹಾಗೂ 100 ಮೀ. ಓಟದಲ್ಲಿ ಚಿನ್ನದ ಪದಕವನ್ನು ಕೊರಳಿಗೇರಿಸಿಕೊಂಡಿದ್ದಾರೆ.
ಮಹಿಳಾ ವಿಭಾಗದ ಗುಂಡೆಸೆತದಲ್ಲಿ ಸರಿತಾ ನಾಗೇಶ್ ಶೆಟ್ಟಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಮಹಾಬಲ ರೈ ಬೂಡು 200 ಮೀ. ಓಟದಲ್ಲಿ ಪ್ರಥಮ ಹಾಗೂ 100 ಮೀ. ಓಟದಲ್ಲಿ ತೃತೀಯ ಸ್ಥಾನವನ್ನು ಪಡೆದು ಮಿಂಚಿದ್ದಾರೆ. ವಿಜೇತರನ್ನು ಸುಳ್ಯ ಬಂಟರ ಸಂಘದ ಅಧ್ಯಕ್ಷ ಜಯಪ್ರಕಾಶ್ ರೈ ಅಭಿನಂದಿಸಿದ್ದಾರೆ.