ನ್ಯೂಸ್ ನಾಟೌಟ್ : ವಿಧಾನಸಭಾ ಚುನಾವಣಾ (Rajasthan Election) ಪ್ರಚಾರದಲ್ಲಿರುವ ಗೃಹ ಸಚಿವ ಅಮಿತ್ ಶಾ (Amit Shah)ವಿದ್ಯುತ್ತ್ ಅಪಾಯದಿಂದ ಪಾರಾದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ನಾಗೌರ್ನಲ್ಲಿ ಅಮಿತ್ ಶಾ ರಥದಲ್ಲಿ (Chariot) ನಿಂತು ಪಕ್ಷದ ಪರ ಪ್ರಚಾರ ನಡೆಸುತ್ತಿದ್ದ ವೇಳೆ ಮಂಗಳವಾರ(ನ.7) ಈ ಘಟನೆ ನಡೆದಿದೆ.
ಈ ವೇಳೆ ವಿಶೇಷವಾಗಿ ವಿನ್ಯಾಸ ಮಾಡಲಾಗಿರುವ ರಥದ ಮೇಲಿನ ಭಾಗ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ರಥ ತಾಗಿದ ಕೂಡಲೇ ಕಿಡಿ ಹೊತ್ತಿಕೊಂಡಿದೆ. ಕೂಡಲೇ ರಥದ ಹಿಂದೆ ಇದ್ದ ಇತರ ವಾಹನಗಳನ್ನು ತಕ್ಷಣವೇ ನಿಲ್ಲಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಯಿತು ಎಂದು ವರದಿ ತಿಳಿಸಿದೆ.
ಪರ್ಬತ್ ಸರ್ ಎಂಬಲ್ಲಿ ಎರಡೂ ಬದಿಗಳಲ್ಲಿ ಅಂಗಡಿಗಳು ಮತ್ತು ಮನೆಗಳಿರುವ ಸಾಲಿನಲ್ಲಿ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ. ಈ ಘಟನೆಯ ಬಳಿಕ ಶಾ ಮತ್ತೊಂದು ವಾಹನದ ಮೂಲಕ ಪರ್ಬತ್ಸರ್ಗೆ ತೆರಳಿ ರ್ಯಾಲಿಯನ್ನು ಉದ್ದೇಶಿಸಿ ಭಾಷಣ ಮಾಡಿದರು ಎನ್ನಲಾಗಿದೆ.
ಘಟನೆಯ ಕುರಿತು ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ತಿಳಿಸಿದ್ದಾರೆ.