ನ್ಯೂಸ್ ನಾಟೌಟ್: ಮದ್ಯದ ನಶೆಯಲ್ಲಿ ಪುಂಡ ಮಗನೊಬ್ಬ ಹೆತ್ತ ತಂದೆ-ತಾಯಿಯ ಮೇಲೆಯೇ ಕತ್ತಿಯಿಂದ ದಾಳಿ ನಡೆಸಿದ ಘಟನೆ ಸೋಮವಾರ ಸಂಜೆ ಬೆಳ್ಳಾರೆ ಸಮೀಪದ ಕಲ್ಲುಪಣೆ ಎಂಬಲ್ಲಿ ನಡೆದಿದೆ. ಸದ್ಯ ಮಗ ಎಸ್ಕೇಪ್ ಆಗಿದ್ದು ಈತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮತ್ತೊಂದು ಕಡೆ ಗಂಭೀರವಾಗಿ ಗಾಯಗೊಂಡಿರುವ ತಂದೆ-ತಾಯಿಯನ್ನು ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ.
ದೇವಿ ಪ್ರಸಾದ್ ಎಂಬಾತ ಮದ್ಯದ ನಶೆಯಲ್ಲಿ ಮನೆಗೆ ಬಂದಿದ್ದಾನೆ. ತಂದೆ-ತಾಯಿಯ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದಿದ್ದಾನೆ. ಬಳಿಕ ಏಕಾಏಕಿ ಕತ್ತಿಯಿಂದ ದಾಳಿ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ತಂದೆ-ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.