ನ್ಯೂಸ್ ನಾಟೌಟ್: ಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬೆನ್ನಲ್ಲೇ ಕಾಂಗ್ರೆಸ್ನಿಂದ ಕರ್ನಾಟಕದಲ್ಲಿ ಆಪರೇಷನ್ ಹಸ್ತ ಶುರುವಾಗಿದೆ ಎಂಬ ಸುದ್ದಿಗೆ ಈಗ ಮತ್ತಷ್ಟು ಬಲ ಬಂದಿದೆ.
ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲಲೇಬೇಕೆಂದಿರುವ ಕಾಂಗ್ರೆಸ್, ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋಲುಕಂಡಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರುಗಳನ್ನು ತನ್ನೆಡೆಗೆ ಸೆಳೆಯುತ್ತಿದೆ.
ಈಗಾಗಲೇ ಜಗದೀಶ್ ಶೆಟ್ಟರ್ ಸೇರಿದಂತೆ ಕೆಲ ಬಿಜೆಪಿ ಮಾಜಿ ಶಾಸಕರುಗಳು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಸಂಬಂಧಿ, ಮಾಜಿ ಶಾಸಕ ಚಿಕ್ಕನಗೌಡರ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿರೊದು ದೊಡ್ಡ ಸಂಚಲನ ಮೂಡಿಸಿದೆ.
ಹಲವು ದಿನಗಳಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮೂಲಕ ಚಿಕ್ಕನಗೌಡರ್ ಗೆ ಕಾಂಗ್ರೆಸ್ ಸಂಪರ್ಕಿಸುತ್ತಿತ್ತು ಎನ್ನಲಾಗಿದೆ. ಇದೀಗ ಶೆಟ್ಟರ್ ಮಾತುಕತೆ ಫಲಪ್ರದದಿಂದಾಗಿ ಚಿಕ್ಕನಗೌಡರ್, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೆ ತೀರ್ಮಾನಿಸಿದ್ದಾರೆ. ಈಗಾಗಲೇ ಜಗದೀಶ್ ಶೆಟ್ಟರ್ ಚಿಕ್ಕನಗೌಡರ್ ನನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಭೇಟಿ ಮಾಡಿಸಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಬಿಜೆಪಿ ನಾಯಕರ ವಿರುದ್ಧ ತೊಡೆತಟ್ಟಿ ಕಾಂಗ್ರೆಸ್ ಸೇರ್ಪಡೆಯಾಗಿರುವ ಜಗದೀಶ್ ಶೆಟ್ಟರ್ ಆಪರೇಷನ್ ಹಸ್ತ ಪ್ರಮುಖ ರೂವಾರಿಯಾಗಿದ್ದಾರೆ ಎನ್ನಲಾಗಿದೆ. ಉತ್ತರ ಕರ್ನಾಟಕದ ಭಾಗದ ಹಲವು ಬಿಜೆಪಿ ಲಿಂಗಾಯತ ನಾಯಕರಿಗೆ ಇವರು ಆಫರ್ ನೀಡುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ಮಾಜಿ ಶಾಸಕರಾದ ಎಂಪಿ ಕುಮಾರಸ್ವಾಮಿ, ರಾಮಣ್ಣ ಲಮಾಣಿ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಇದೀಗ ಯಡಿಯೂರಪ್ಪ ಸಂಬಂಧಿ ಚಿಕ್ಕನಗೌಡ ಕಾಂಗ್ರೆಸ್ ಸೇರಲು ಅಧಿಕೃತ ಮುದ್ರೆಯೊಂದೆ ಬಾಕಿ ಎನ್ನಲಾಗಿದೆ.
ಹೈಕಮಾಂಡ್ ಸೂಚನೆ ಮೇರೆಗೆ ಜಗದೀಶ್ ಶೆಟ್ಟರ್ ಅವರು ಬಿಜೆಪಿಯ ಹಲವು ನಾಯಕರಿಗೆ ಕಾಂಗ್ರೆಸ್ಗೆ ಆಹ್ವಾನ ನೀಡಿದ್ದಾರೆ.ಅಲ್ಲದೇ ಈ ಬಗ್ಗೆ ಕೆಲವರ ಜೊತೆ ಒಂದು ಹಂತದ ಮಾತುಕತೆಗಳು ಸಹ ಮುಗಿದಿವೆ ಎಂದ ಎನ್ನಲಾಗಿದೆ.