ನ್ಯೂಸ್ ನಾಟೌಟ್ : ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ವ್ಯಕ್ತಿಯೊಬ್ಬರು ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಉದಯ ದೊಡ್ಕಜೆ (38 ವರ್ಷ) ಎಂದು ಗುರುತಿಸಲಾಗಿದೆ.
ನವೆಂಬರ್ 16 ರಂದು ರಾತ್ರಿ ರಬ್ಬರ್ ಕೃಷಿಗೆಂದು ತಂದಿದ್ದ ಆ್ಯಸಿಡ್ ಅನ್ನು ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ತಕ್ಷಣ ಸುಳ್ಯದ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಈ ವೇಳೆ ಅವರ ಆರೋಗ್ಯದಲ್ಲಿ ಭಾರಿ ವ್ಯತ್ಯಾಸ ಕಂಡು ಬಂದಿದ್ದನ್ನು ಗಮನಿಸಿದ ವೈದ್ಯರು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ. ತಕ್ಷಣ ಅವರನ್ನು ಅಲ್ಲಿಂದ ಮಂಗಳೂರಿನತ್ತ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ವಿವಾಹಿತರಾಗಿದ್ದ ಉದಯ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.