ನ್ಯೂಸ್ ನಾಟೌಟ್: ಭಾರತ ಗೋಮಾಂಸವನ್ನು ರಫ್ತು ಮಾಡುವುದರಲ್ಲಿ ವಿಶ್ವದಲ್ಲೇ 2ನೇ ಸ್ಥಾನದಲ್ಲಿದೆ ಎಂದು ವರದಿ ತಿಳಿಸಿದೆ. ಬ್ರೆಜಿಲ್ ನ ನಂತರದ ಸ್ಥಾನದಲ್ಲಿ ಭಾರತ ಎನ್ನಲಾಗಿದ್ದು, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಛತ್ತೀಸ್ಗಢ, ಮಹಾರಾಷ್ಟ್ರ ಹಾಗೂ ಕರ್ನಾಟಕ ಸೇರಿ 2ನೇ ಸ್ಥಾನದಲ್ಲಿದೆ ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.
ಇದರ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿ (Narendra Modi)ಗೆ ಸಲ್ಲಬೇಕು ಎಂದು ಸಚಿವ ಸಂತೋಷ್ ಲಾಡ್ (Santosh Lad) ಟೀಕಿಸಿದ್ದಾರೆ.
ಗೋವುಗಳನ್ನು ಕಸಾಯಿಖಾನೆಗೆ ಕಳುಹಿಸುವುದು ಬೇಡ ಎಂತಾದರೆ, ದೇಶಾದ್ಯಂತ ಗೋಶಾಲೆ ತೆರೆಯಲಿ. ಗೋಮಾಂಸ ರಫ್ತು ಮಾಡುವುದನ್ನು ಬ್ಯಾನ್ ಮಾಡಲಿ ಎಂದು ಸವಾಲು ಎಸೆದರು.
ಕೃಷಿ ವಿಶ್ವವಿದ್ಯಾಲಯ ಕೆಲವೊಂದಿಷ್ಟು ಜಾನುವಾರುಗಳನ್ನು ಹರಾಜು ಮಾಡುತ್ತಿರುವುದಕ್ಕೆ ಬಜರಂಗದಳ ವಿರೋಧ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಗೋವಾ ಮತ್ತು ಮಣಿಪುರದಲ್ಲಿ ಗೋಮಾಂಸಕ್ಕೆ ಅವಕಾಶ ಕೊಟ್ಟಿದ್ದಾರೆ. ಚುನಾವಣೆ ಬಂದಿರುವ ಕಾರಣ ಏನೇನೋ ವಿಚಾರ ತರುತ್ತಿದ್ದಾರೆ ಎಂದು ಕಿಡಿಕಾರಿದರು.
ಬಿಹಾರದಲ್ಲಿ ಒಂದು ವಾರದಲ್ಲಿ 8.5 ಲಕ್ಷ ಶೌಚಾಲಯ ಕಟ್ಟಿಸಿದ್ದೇವೆ ಎಂದು ಪ್ರಧಾನಿಯವರು ಹೇಳಿದ್ದಾರೆ. ಇದನ್ನು ನಂಬಲು ಸಾಧ್ಯವೇ? ಇರದೇ ಇರುವ ರೈಲ್ವೆ ನಿಲ್ದಾಣಗಳ ಪ್ರಸ್ತಾಪ ಮಾಡಿದ್ದಾರೆ. ರಾಣಿ, ದುರ್ಗಾ, ದೇವಿ ಸ್ಟೇಷನ್ ಅಂತೆಲ್ಲಾ ಹೇಳಿದ್ದಾರೆ. ಆ ಸ್ಟೇಷನ್ಗಳು ಭಾರತದಲ್ಲಿ ಇಲ್ಲ. ಆದರೂ ಬಿಜೆಪಿಯವರ ಪಿಚ್ಚರ್ ನಡೆಯುತ್ತಿದೆ, ನಡೆಯಲಿ ಎಂದು ಟಾಂಗ್ ನೀಡಿದರು.