ನ್ಯೂಸ್ ನಾಟೌಟ್: ಸಾಮಾಜಿಕ ಜಾಲತಾಣ ಫೇಸ್ಬುಕ್ ಖಾತೆಯಲ್ಲಿ ಪಾಕಿಸ್ತಾನ ಧ್ವಜ ಶೇರ್ ಮಾಡಿ, ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡಿ ವೀಡಿಯೊವೊಂದನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ 30 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.
ಆರೋಪಿ ಬುಂದನ್ ಅಲಿ ವಿರುದ್ಧ ಸ್ಥಳೀಯ ಸಾಮಾಜಿಕ ಮಾಧ್ಯಮ ಬಳಕೆದಾರರು ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗಿದ್ದು, ಬರೇಲಿಯ ಇಜ್ಜತ್ನಗರ ನಿವಾಸಿಯಾಗಿರುವ ಅಲಿ ಅರೆಕಾಲಿಕ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಅಲಿ ತಮ್ಮ ಎಫ್ಬಿ ಖಾತೆಯ ಸ್ಟೇಟಸ್ ಸಂದೇಶದಲ್ಲಿ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಅಪಹಾಸ್ಯ ಮಾಡುವ ವೀಡಿಯೊದೊಂದಿಗೆ ಪಾಕಿಸ್ತಾನದ ಧ್ವಜವನ್ನು ಪೋಸ್ಟ್ ಮಾಡಿದ್ದ, ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ, ಫೋಸ್ಟ್ ಡಿಲೀಟ್ ಮಾಡಲು ನಿರಾಕರಿದ್ದಾನೆ. ಆದ್ದರಿಂದ ಬೇರೆ ಆಯ್ಕೆಯಿಲ್ಲದೆ ಪೊಲೀಸರಿಗೆ ದೂರು ನೀಡಿರುವುದಾಗಿ ದೂರುದಾರರು ತಿಳಿಸಿದ್ದಾರೆ ಎನ್ನಲಾಗಿದೆ.
ತನಿಖೆಯ ಸಮಯದಲ್ಲಿ ಅಲಿ ಪೋಸ್ಟ್ “ಪ್ರಚೋದನಕಾರಿ ಎಂದು ಕಂಡುಬಂದಿದ್ದು, ಆತನ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67ರ ಜೊತೆಗೆ ಐಪಿಸಿ ಸೆಕ್ಷನ್ 295-ಎ 153-ಎ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.