ನ್ಯೂಸ್ ನಾಟೌಟ್ : ಇಂದು ಕನ್ನಡ ರಾಜ್ಯೋತ್ಸವ.. ಎಲ್ಲೆಲ್ಲೂ ಸಂಭ್ರಮ ಮನೆ ಮಾಡಿದೆ.ಆದರೆ ಪಬ್ವೊಂದರಲ್ಲಿ (Pub) ಕನ್ನಡ ಹಾಡು (Kannada Song) ಹಾಕಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನಿಂದ(Bengaluru) ಕನ್ನಡ ರಾಜ್ಯೋತ್ಸವ ದಿನದಂದೇ ಬೆಳಕಿಗೆ ಬಂದಿದೆ . ಆರ್ಆರ್ ನಗರದ (RR Nagar) ಐಡಿಯಲ್ ಹೋಮ್ ಬಳಿ ನಡೆದಿದ್ದು,ಇದೀಗ ತಡವಾಗಿ ಬೆಳಕಿಗೆ ಬಂದಿದೆ.
ಐಡಿಯಲ್ ಹೋಮ್ ಬಳಿಯ ಪಬ್ನಲ್ಲಿ ಅಕ್ಟೋಬರ್ 25ರಂದು ಘಟನೆ ನಡೆದಿದೆ ಎನ್ನಲಾಗಿದೆ. ಪಬ್ನಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹ* ಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಶ್ರೇಯಸ್ ಹಾಗೂ ಆತನ ಸ್ನೇಹಿತರು ರಾತ್ರಿ 10:45ರ ಸುಮಾರಿಗೆ ಪಬ್ಗೆ ಬಂದಿದ್ದರು. ಈ ವೇಳೆ ಪಬ್ನಲ್ಲಿ ಕನ್ನಡ ಹಾಡು ಹಾಕಲಾಗಿತ್ತು. ಇದೇ ಸಂದರ್ಭ ಕನ್ನಡ ಹಾಡು ಹಾಕಿದ್ದಕ್ಕೆ ಜಗಳ ತೆಗೆದಿದ್ದಾರೆ ಎಂದು ಹೇಳಲಾಗಿದೆ.
ಪಬ್ ಮಾಲೀಕ ರವಿಕಾಂತ್ ನೀಡಿದ ದೂರಿನನ್ವಯ ಎಫ್ಐಆರ್ (FIR) ದಾಖಲು ಮಾಡಲಾಗಿದೆ. ಶ್ರೇಯಸ್ ಹಾಗೂ ಆತನ ಸ್ನೇಹಿತನ ವಿರುದ್ಧ ಪಬ್ ಮ್ಯಾನೇಜರ್ ದೂರು ನೀಡಿದ್ದು, ಆರ್ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.