ನ್ಯೂಸ್ ನಾಟೌಟ್ :ಕುಡಿತದ ಚಟದಿಂದ ಎಷ್ಟೋ ಕುಟುಂಬಗಳು ಬೀದಿಗೆ ಬರುವುದನ್ನು ತಪ್ಪಿಸಿದ ಪುಣ್ಯದ ಕೆಲಸ ಕಾರ್ಯಗಳು ಈ ಶಿಬಿರದಿಂದ ನಡೆಯುತ್ತಿದೆ.ಮದ್ಯವೆಂಬ ಹೆಮ್ಮಾರಿಯಿಂದ ಮುಕ್ತಿ ಸಿಕ್ಕಿದ ಬಳಿಕ ಹೆಂಡತಿ-ಮಕ್ಕಳ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದ ಯಜ್ಞದಂತ ಕಾರ್ಯವನ್ನು ನಾವೆಲ್ಲರೂ ಸ್ಮರಿಸಲೇಬೇಕು. ಮದ್ಯ ಸೇವನೆಗೊಳಗಾದವರಿಗೆ ಚಿಕಿತ್ಸೆ, ಸಲಹೆ-ಮಾರ್ಗದರ್ಶನ ಮಾಡಿ ಅವರ ಜೀವನ ಉತ್ತಮಗೊಳಿಸುವ ಸೇವೆ ನಿಜಕ್ಕೂ ಮಾದರಿಯಾದುದು ಎಂದು ಅಜ್ಜಾವರ 1753 ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಎ.ಭಾಸ್ಕರ ರಾವ್ ಬಯಂಬು ಹೇಳಿದರು.
ನ.3 ರಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅಜ್ಜಾವರ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯುವ ಒಂದು ವಾರಗಳ ಮದ್ಯವರ್ಜನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜನಜಾಗೃತಿ ವೇದಿಕೆ ಮಾಜಿ ಜಿಲ್ಲಾಧ್ಯಕ್ಷ ಎನ್.ಎ. ರಾಮಚಂದ್ರ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಧರ್ಮಸ್ಥಳ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಸುಳ್ಯ ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷ ಸುಭೋದ್ ಶೆಟ್ಟಿ ಮೇನಾಲ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಅಜ್ಜಾವರ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಿವಪ್ರಕಾಶ್ ಅಡ್ಪಂಗಾಯ, ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಭವಾನಿಶಂಕರ್ ಅಡ್ತಲೆ,ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ ಕಲ್ಲಡ್ಕ, ಮಾಜಿ ಅಧ್ಯಕ್ಷೆ ಸತ್ಯವತಿ ಬಸವನಪಾದೆ, ಮಂಡೆಕೋಲು ಗ್ರಾ.ಪಂ. ಅಧ್ಯಕ್ಷ ಕುಶಲ ಉದ್ದಂತಡ್ಕ, ಮಾಜಿ ಅಧ್ಯಕ್ಷೆ ವಿನುತಾ ಪಾತಿಕಲ್ಲು, ಅಜ್ಜಾವರ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಅಧ್ಯಕ್ಷ ಸೀತಾರಾಮ್ ಎಂ, ತಾ.ಪಂ. ಮಾಜಿ ಅಧ್ಯಕ್ಷ ಚನಿಯ ಕಲ್ಲಡ್ಕ, ಅಜ್ಜಾವರ ಪ್ರತಾಪ ಯುವಕ ಮಂಡಲ ಅಧ್ಯಕ್ಷ ಗುರುರಾಜ್ ಅಜ್ಜಾವರ, ಚೈತ್ರಾ ಯುವತಿ ಮಂಡಲ ಅಧ್ಯಕ್ಷೆ ಶಶ್ಮಿ ಭಟ್ ಅಜ್ಜಾವರ, ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ್ ಮೇನಾಲ ಜತೆಗಿದ್ದರು.
ಇದೇ ವೇಳೆ ಮಂಡೆಕೋಲು ಸಹಕಾರ ಸಂಘದ ಅಧ್ಯಕ್ಷ ರಾಮಕೃಷ್ಣ ರೈ ಪೇರಾಲುಗುತ್ತು, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಮಹೇಶ್ ಮೇನಾಲ, ನಿವೃತ್ತ ಎ.ಎಸ್.ಐ. ಭಾಸ್ಕರ ಅಡ್ಕಾರ್, ಜನಜಾಗೃತಿ ವೇದಿಕೆಯ ಮಲ್ಲೇಶ್ ಬೆಟ್ಟಂಪಾಡಿ, ಪದ್ಮನಾಭ ಜೈನ್ ವೇದಿಕೆಯಲ್ಲಿ ಇದ್ದರು.
ಪುಷ್ಪಾವತಿ ದೊಡ್ಡೇರಿ ಪ್ರಾರ್ಥಿಸಿದರು. ಯೋಜನಾಧಿಕಾರಿ ನಾಗೇಶ್ ಪಿ. ಸ್ವಾಗತಿಸಿದರು. ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ ಆಚಾರ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಗತಿ ಬಂಧು ಸ್ವಸಹಾಯ ಸಂಘದ ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷ ಬೂಡು ರಾಧಾಕೃಷ್ಣ ರೈ ಕಾರ್ಯಕ್ರಮ ನಿರೂಪಿಸಿದರು. ಮೇಲ್ವಿಚಾರಕಿ ವಿಶಾಲ ಕೆ. ಸಹಕರಿಸಿದರು.
ಒಂದು ವಾರಗಳ ಕಾಲ ನಡೆಯುವ ಶಿಬಿರದಲ್ಲಿ ಯೋಗ, ಧ್ಯಾನ, ಗುಂಪು ಸಲಹೆ, ಕೌಟುಂಬಿಕ ಸಲಹೆ, ಮಾಹಿತಿ ಮಾರ್ಗದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಯೂ ನಡೆಯಲಿದೆ.