ನ್ಯೂಸ್ ನಾಟೌಟ್:ಯಾರೋ ಮಾಡಿದ ಯಾರಿಗೋ ಶಿಕ್ಷೆ ಎಂಬಂತೆ ಇಲ್ಲೊಂದು ಹೃದಯವಿದ್ರಾವಕ ಘಟನೆ ವರದಿಯಾಗಿದೆ.ಅಡುಗೆ ಸಿಬ್ಬಂದಿ ವರ್ಗ ಮಾಡಿದ ಭೇಜವಾಬ್ದಾರಿಯಿಂದಾಗಿ ಬಾಲಕಿಯೋರ್ವಳು ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದು, ಗಂಭೀರವಾದ ಸುಟ್ಟ ಗಾಯಗಳಾಗಿದೆ.ಇದೀಗ 2ನೇ ತರಗತಿಯ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದ ಮನಕಲಕುವ ಘಟನೆ ಸಂಭವಿಸಿದೆ.
ಮಹಾಂತಮ್ಮ (6) ಮೃತ ವಿದ್ಯಾರ್ಥಿನಿ.ಸಾಂಬಾರ್ ಪಾತ್ರೆಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ 2ನೇ ತರಗತಿಯ ವಿದ್ಯಾರ್ಥಿನಿ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದಳು.ಅಫಜಲಪುರ ತಾಲೂಕಿನ ಚಿಣಮಗೇರ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ ನವೆಂಬರ್ 16ರಂದು ಈ ಘೋರ ದುರಂತ ನಡೆದಿತ್ತು.ವಿದ್ಯಾರ್ಥಿನಿ ಸಾಂಬಾರ್ ಪಾತ್ರೆಗೆ ಬಿದ್ದ ಹಿನ್ನೆಲೆ ಆಕೆಗೆ ಗಂಭೀರವಾದ ಸುಟ್ಟ ಗಾಯಗಳಾಗಿತ್ತು. ಆಕೆಯನ್ನು ಮೊದಲಿಗೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ದುರ್ಘಟನೆಯ ಹಿನ್ನೆಲೆ ನಿರ್ಲಕ್ಷ್ಯದಡಿ ಶಾಲೆಯ ಮುಖ್ಯ ಅಡುಗೆಯವರು, ಮುಖ್ಯ ಶಿಕ್ಷಕ ಸೇರಿದಂತೆ ಹಲವರನ್ನು ಅಮಾನತು ಮಾಡಲಾಗಿದೆ. ನಿನ್ನೆಯಷ್ಟೇ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಸುರಕ್ಷಿತ ಬಿಸಿಯೂಟ ವಿತರಣೆ ಮಾಡದಿರುವುದು ಗಂಭೀರ ಕರ್ತವ್ಯ ಲೋಪಕ್ಕೆ ಪುಟ್ಟ ಜೀವ ಬಲಿಯಾಗಿದೆ.