ನ್ಯೂಸ್ ನಾಟೌಟ್: ಮಕ್ಕಳಾಗಲಿಲ್ಲವೆಂದು ಮನನೊಂದು ವ್ಯಕ್ತಿಯೊಬ್ಬರು ವಿಷ ಸೇವಿಸಿರುವ ಘಟನೆ ಕಡಬ ತಾಲೂಕು ಕಾಣಿಯೂರು ಗ್ರಾಮದ ಅಬ್ಬಡದಲ್ಲಿ ಭಾನುವಾರ ನಡೆದಿದೆ.
ಮೃತಪಟ್ಟವರನ್ನು ಲೋಕಯ್ಯ (43 ವರ್ಷ) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರು ಸಾವಿಗೆ ಶರಣಾಗಿದ್ದಾರೆ. ಕಳೆದ 20 ವರ್ಷಗಳ ಹಿಂದೆ ಅವರು ಶೋಭಾ ಅನ್ನುವವರ ಜೊತೆ ವಿವಾಹವಾಗಿದ್ದರು. ಆದರೆ ಅವರಿಗೆ ಸಂತಾನ ಭಾಗ್ಯ ಒಲಿದು ಬಂದಿರಲಿಲ್ಲ. ಇದರಿಂದ ನೊಂದು ಮದ್ಯ ಸೇವನೆ ಮಾಡಲು ಶುರು ಮಾಡಿಕೊಂಡಿದ್ದರು. ಇತ್ತೀಚೆಗೆ ಸುಮಾರು 4 ವರ್ಷಗಳಿಂದ ಲೋಕಯ್ಯ ಗೌಡರು ಕೂಲಿ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇದ್ದು , ಮದ್ಯ ಸೇವನೆ ಅಧಿಕವಾಗಿ ಸಮಯಕ್ಕೆ ಸರಿಯಾಗಿ ಅನ್ನ – ಆಹಾರ ಇಲ್ಲದೇ ನಿತ್ರಾಣಗೊಂಡಿದ್ದರು . ಈ ದಿನ ದಿನಾಂಕ 12-11-2023 ರಂದು ಶೋಭಾ ಬೆಳಗ್ಗೆ 9-00 ಗಂಟೆಗೆ ಕೂಲಿ ಕೆಲಸಕ್ಕೆ ಹೋಗಿದ್ದು , ಸಂಜೆ 03-00 ಗಂಟೆಗೆ ಮನೆಗೆ ಬಂದಾಗ ಮನೆಯ ಹಾಲ್ ನಲ್ಲಿ ಲೋಕಯ್ಯ ಗೌಡರು ಬಿದ್ದುಕೊಂಡಿದ್ದು , ಅವರ ಬಾಯಿಯಿಂದ ಬಿಳಿ ನೊರೆ ಬಂದಿದ್ದು , ಘಾಟು ವಾಸನೆ ಬರುತ್ತಿತ್ತು . ಮುಟ್ಟಿ ನೋಡಿದಾಗ ಮೈ ತಣ್ಣಗಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.