ನ್ಯೂಸ್ ನಾಟೌಟ್: ಸಿಎಂ ಸಿದ್ದರಾಮಯ್ಯ ನಾನೇ ಮುಂದೆ 5 ವರ್ಷವೂ ಸಿಎಂ ಎಂದ ಬಳಿಕ ಕಾಂಗ್ರೆಸ್ ನಾಯಕ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಹೈಕಮಾಂಡ್ ಯಾರು ಸಿಎಂ ಆಗಬೇಕು ಅಥವಾ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದರೆ ನಾನು ಸಿದ್ಧನಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿಕೆ ನೀಡಿದ್ದು ಭಾರಿ ಚರ್ಚೆಗೆ ಕಾರಣವಾಗಿದೆ.
ದೆಹಲಿಯಲ್ಲಿ ನಾಲ್ಕು ಜನ ಕುಳಿತು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಸಿಎಂ ಅವರದ್ದು ವೈಯಕ್ತಿಕ ಅಭಿಪ್ರಾಯ. ಜಿಲ್ಲಾ ಪಂಚಾಯತ್ ಸದಸ್ಯರಿಂದ ಹಿಡಿದು ಶಾಸಕರವರೆಗೆ ಎಲ್ಲರಿಗೂ ತಮ್ಮ ಅಭಿಪ್ರಾಯ ಹೇಳಲು ಸ್ವಾತಂತ್ರವಿದೆ. ಇದರಲ್ಲಿ ತಪ್ಪು ಏನು ಇಲ್ಲ. ಆದರೆ ಅವರ ಹೇಳಿಕೆ, ಕಲ್ಲಿನ ಕೆತ್ತಿದ ಶಾಸನವಲ್ಲ. ಎಲ್ಲವೂ ಪಕ್ಷದ ಹೈಕಮಾಂಡ್ಗೆ ಬಿಟ್ಟಿದ್ದು ಎಂದು ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ತಿಳಿಸಿದ್ದಾರೆ.
ರಾಜ್ಯದಲ್ಲಿ ವಿಪಕ್ಷ ಎಲ್ಲಿದೆ? ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಪಾರ್ಟಿಯಾಗಿದೆ. ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಇಲ್ಲಿ ಕಾಂಗ್ರೆಸ್ ವಿರುದ್ಧ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರೂ ಸಿಗುತ್ತಿತ್ತು ಎಂದು ವ್ಯಂಗ್ಯವಾಡಿದರು.
ಬಿಜೆಪಿ (BJP) ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಇಲ್ಲಿ ಕಾಂಗ್ರೆಸ್ ವಿರುದ್ಧ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರು ಸಿಗುತ್ತಿತ್ತು. ಬಿಜೆಪಿಯಿಂದ ಪಾಠ ಕಲಿಯುವ ಅಗತ್ಯವಿಲ್ಲ. ಯಡಿಯೂರಪ್ಪ ಅವರನ್ನ ಕಡೆಗಣಿಸಿದ್ದಾರೆ. ಈಗ ಮಾತನಾಡಿದರೆ ಮಗನಿಗೆ ಸ್ಥಾನ ಸಿಗಬಹುದು ಎಂಬ ಕಾರಣಕ್ಕೆ ಮಾತನಾಡುತ್ತಿದ್ದಾರೆ ಎಂದರು.