ನ್ಯೂಸ್ ನಾಟೌಟ್ : ಇತ್ತೀಚೆಗೆ ಆನ್ ಲೈನ್ ನಲ್ಲಿ ಡೀಫ್ ಫೇಕ್ ನಂತಹ ಮೋಸದ ಜಾಲಗಳು ಹೆಚ್ಚಾಗಿವೆ. ಇದರ ಜೊತೆಗೆ ಉನ್ನತ ಮಟ್ಟದ ಅಧಿಕಾರಿಗಳು ಮತ್ತು ಮಂತ್ರಿಗಳ ಹೆಸರಲ್ಲಿ ನಕಲಿ ಸಾಮಾಜಿಕ ಜಾಲತಾಣದ ಖಾತೆಗಳನ್ನು ತೆರೆದು ಮಾನಹಾನಿ ಮತ್ತು ಹಣದ ವಂಚನೆಯ ಪ್ರಕರಣಗಳು ವರದಿಯಾಗುತ್ತಿರುತ್ತವೆ. ಈಗ ಕರ್ನಾಟದ ಶಿಕ್ಷಣ ಸಚಿವರ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಶಿಕ್ಷಣ ಸಚಿವ ಮಧುಬಂಗಾರಪ್ಪ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಗ್ರೂಪ್ ತಯಾರಿಸಿ ಅದರಲ್ಲಿ ಸಚಿವರ ಹಾಗೂ ಸಚಿವರ ಪಕ್ಷಕ್ಕೆ ವಿರುದ್ಧವಾದ ಫೋಸ್ಟ್ ಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಪ್ರಕರಣ ಸಂಬಂಧ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಯೋಜಕರಾದ ಜಿ.ಡಿ ಮಂಜುನಾಥ್ ದೂರು ನೀಡಿದ್ದಾರೆ.
ನ.27(ಸೋಮವಾರ)ರಂದು ಫೇಕ್ ಐಡಿ ಪ್ರಕರಣ ಬೆಳಕಿಗೆ ಬಂದಿದೆ. ಸಚಿವರ ಹೆಸರಿನಲ್ಲಿ ‘ಶ್ರೀ ಮಾನ್ಯ ಮಧು ಬಂಗಾರಪ್ಪ ಜಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು’ ಎಂಬ ಹೆಸರಿನ ನಕಲಿ ಫೇಸ್ಬುಕ್ ಗ್ರೂಪ್ ಕ್ರಿಯೇಟ್ ಮಾಡಿರುವುದು ಕಂಡು ಬಂದಿದೆ ಎನ್ನಲಾಗಿದೆ.