ನ್ಯೂಸ್ ನಾಟೌಟ್ : ಸುಳ್ಯದ ಕಳಂಜದಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ ಎಂದು ವರದಿ ತಿಳಿಸಿದೆ.
ಆರೋಪಿಗಳಾದ ಅಭಿಲಾಷ್ ಮತ್ತು ಸುನಿಲ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯ ಜಾಮೀನು ನೀಡಿದೆ ಎನ್ನಲಾಗಿದೆ.
ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಜಾಮೀನು ಮಂಜೂರು ಮಾಡಿದ್ದಾರೆ.
ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ವಹಿಸಿದ್ದರು.
ಪ್ರಕರಣದ ಒಟ್ಟು ಎಂಟು ಆರೋಪಿಗಳ ಪೈಕಿ ಈ ಮೊದಲು ಆರು ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು ಈಗ ಮತ್ತಿಬ್ಬರಿಗೆ ಷರತ್ತು ಬದ್ಧ ಜಾಮೀನು ದೊರಕಿದೆ.