ನ್ಯೂಸ್ ನಾಟೌಟ್ : ಖ್ಯಾತ ನಟಿ ತ್ರಿಷಾ ಕೃಷ್ಣನ್ ಅವರ ವಿರುದ್ಧ ತಮಿಳು ನಟ ಮನ್ಸೂರ್ ಅಲಿ ಖಾನ್ ಅವರು ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ವಿವಾದದ ಕೇಂದ್ರ ಬಿಂದುವಾಗಿದ್ದಾರೆ. “ನಾನು ಲಿಯೋ ಸಿನಿಮಾದಲ್ಲಿ ತ್ರಿಶಾ ಜತೆ ಅತ್ಯಾಚಾರದ ದೃಶ್ಯ ಮಾಡಬೇಕಿತ್ತು” ಎಂದು ಮನ್ಸೂರ್ ಅಲಿ ಖಾನ್ (Mansoor Ali Khan) ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಗೆ ಕಾರಣವಾಗಿದೆ.ಈ ಹೇಳಿಕೆ ಭಾರಿ ವಿರೋಧಗಳು ವ್ಯಕ್ತವಾಗುತ್ತಿದ್ದು, ನಟನಿಗೆ ಗಣ್ಯರಿಂದ ಹಿಡಿದು ಸಾಮಾನ್ಯರವರೆಗೆ ಚಾಟಿ ಬೀಸಿದ್ದಾರೆ.
ಮಾಧ್ಯಮವೊಂದರಲ್ಲಿ ಹೇಳಿಕೆ ನೀಡಿದ್ದ ಮನ್ಸೂರ್ ಅಲಿ ಖಾನ್ ನಾನು ಲಿಯೋ ಸಿನಿಮಾದಲ್ಲಿ ತ್ರಿಶಾ ಅವರ ಜತೆ ನಟಿಸುತ್ತೇನೆ ಎಂದಾಗ ಖುಷಿಯಾಯಿತು. ಬೇರೆ ನಟಿಯರ ಜತೆ ಇದ್ದಂತೆ ತ್ರಿಶಾ ಅವರ ಜತೆಗೂ ಒಂದು ಬೆಡ್ರೂಮ್ ಸೀನ್ ಇರುತ್ತದೆ ಎಂದು ಭಾವಿಸಿದ್ದೆ. ನಾನು ತುಂಬ ರೇಪ್ ದೃಶ್ಯಗಳಲ್ಲಿ ನಟಿಸಿರುವ ಕಾರಣ ಇದೆಲ್ಲ ನನಗೆ ಏನೂ ಅನಿಸುವುದಿಲ್ಲ. ಆದರೆ, ಸಿನಿಮಾ ತಂಡದವರು ಕಾಶ್ಮೀರದಲ್ಲಿ ಶೂಟಿಂಗ್ ಮಾಡುವ ವೇಳೆ ನನಗೆ ತ್ರಿಶಾ ಅವರನ್ನು ತೋರಿಸಲೇ ಇಲ್ಲ” ಎಂದು ಹೇಳಿದ್ದರು. ಇದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.ಇದಕ್ಕೆ ಪ್ರತಿಕ್ರಿಯಿಸಿದ್ದ ತ್ರಿಷಾ ಕೃಷ್ಣನ್“ಮನ್ಸೂರ್ ಅಲಿ ಖಾನ್ ಅವರು ಇತ್ತೀಚೆಗೆ ನನ್ನ ಬಗ್ಗೆ ಅಸಭ್ಯವಾಗಿ ಮಾತನಾಡಿದ ವಿಡಿಯೊ ನೋಡಿದೆ. ಇಂತಹ ಕೀಳು ಅಭಿರುಚಿಯ, ಸ್ತ್ರೀದ್ವೇಷದಿಂದ ಕೂಡಿರುವ, ತುಚ್ಚ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ನಾನು ಇಂತಹ ವ್ಯಕ್ತಿಯ ಜತೆ ಇದುವರೆಗೆ ತೆರೆ ಹಂಚಿಕೊಂಡಿಲ್ಲ ಎಂಬುದೇ ಸಮಾಧಾನದ ಸಂಗತಿ. ಅಷ್ಟೇ ಅಲ್ಲ, ನಾನು ಸಿನಿಮಾ ಕ್ಷೇತ್ರದಲ್ಲಿ ಇರುವವರೆಗೆ ಈ ವ್ಯಕ್ತಿಯ ಜತೆ ನಟಿಸುವುದಿಲ್ಲ. ಇಂತಹ ವ್ಯಕ್ತಿಗಳು ಮನುಕುಲಕ್ಕೇ ಕೆಟ್ಟ ಹೆಸರು ತರುತ್ತಾರೆ” ಎಂದು ಪೋಸ್ಟ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಹಲವಾರು ಮಂದಿ ವಿರೋಧದ ಮಾತುಗಳನ್ನೇ ಆಡಿದ್ದಾರೆ.