ನ್ಯೂಸ್ ನಾಟೌಟ್: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ಗಿರಿ ಪ್ರಕರಣದ ಸದ್ದು ಮಾಡಿದೆ. ಮಂಗಳೂರಿನ ಮಂಕಿಸ್ಟ್ಯಾಂಡ್ನ ಮಳಿಗೆಯೊಂದರಲ್ಲಿ ಕೆಲಸಕ್ಕಿದ್ದ ಮುಸ್ಲಿಂ ಯುವಕ ಮತ್ತು ಚಿಕ್ಕಮಗಳೂರಿನ ಯುವತಿ ಜೊತೆಯಾಗಿ ಬೈಕ್ನಲ್ಲಿ ಸುತ್ತಾಟ ನಡೆಸುತ್ತಿದ್ದರು. ಈ ಜೋಡಿಯನ್ನು ಗಮನಿಸಿದ ಬಜರಂಗದಳದ ಕಾರ್ಯಕರ್ತರು ಬೆನ್ನಟ್ಟಿ ಮಂಗಳೂರಿನ ಮೊರ್ಗನ್ಸ್ ಗೇಟ್ ಬಳಿ ತಡೆದು ತರಾಟೆಗೆತ್ತಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.
ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳದಲ್ಲಿ ಎರಡು ಕೋಮಿನ ಯುವಕರ ತಂಡ ಜಮಾಯಿಸಿದ್ದರು. ಎರಡು ಕೋಮಿನ ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತೆರಳುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಪಾಂಡೇಶ್ವರ ಠಾಣೆಯ ಪೊಲೀಸರು ಗುಂಪು ಚದುರಿಸಿ ಅನ್ಯಕೋಮಿನ ಜೋಡಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಅನ್ಯಕೋಮಿನ ಜೋಡಿಯನ್ನು ತರಾಟೆಗೆತ್ತಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರ ಯುವಕರನ್ನು ಪಾಂಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.