ನ್ಯೂಸ್ ನಾಟೌಟ್ : 5 ಗ್ಯಾರಂಟಿಗಳ (Congress guarantee) ಮೂಲಕ ಕರ್ನಾಟಕ ವಿಧಾನಸಭೆ ಚುನಾವಣೆ (Karnataka assembly election) ಅಭೂತಪೂರ್ವ ಗೆಲುವನ್ನು ಸಾದಿಸಿತ್ತು.ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ.ಆದರೆ ಈ ಗ್ಯಾರಂಟಿಗಳನ್ನೇ ಪಂಚ ರಾಜ್ಯ ಚುನಾವಣೆಗಳಲ್ಲೂ (five state elections) ಗೆಲುವಿನ ಅಸ್ತ್ರವಾಗಿ ಬಳಸೋದಕ್ಕೆ ಕಾಂಗ್ರೆಸ್ ಮುಂದಾಗಿದೆ.ಹೌದು,ತೆಲಂಗಾಣ ವಿಧಾನಸಭಾ ಚುನಾವಣಾ (Telangana assembly election) ಗೆಲುವಿಗಾಗಿ ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಿಸಿದೆ. ಪ್ರಮುಖವಾಗಿ 6 ಗ್ಯಾರಂಟಿಗಳನ್ನು ಘೋಷಣೆ ಮಾಡುವುದರ ಮೂಲಕ ಜನರ ಮನಸ್ಸನ್ನು ಸೆಳೆಯಲು ರಣತಂತ್ರ ಹೂಡಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜತೆಗೆ ಮಾಸಿಕ 2500 ರೂಪಾಯಿಗಳನ್ನು ನೀಡುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ..!
ಕರ್ನಾಟಕದಂತೆ ತೆಲಂಗಾಣದಲ್ಲೂ ಆಡಳಿತ ನಡೆಸುವ ಕನಸು ಕಾಣುತ್ತಿರುವ ಕಾಂಗ್ರೆಸ್, ತೆಲಂಗಾಣಕ್ಕೆ 6 ಗ್ಯಾರಂಟಿಗಳನ್ನು ಘೋಷಿಸಿದೆ.ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮೊದಲ ಸಚಿವ ಸಂಪುಟ ಸಭೆಯಲ್ಲೇ ಆರೂ ಗ್ಯಾರಂಟಿಗಳನ್ನು ಅನುಷ್ಠಾನ ಗೊಳಿಸುತ್ತೇವೆ ಅಂತ ಭರವಸೆ ನೀಡಿದ್ರು.ಕರ್ನಾಟಕದಲ್ಲಿ ಮಹಿಳೆಯರಿಗೆ ಶಕ್ತಿ ಹೆಸರಲ್ಲಿ ಫ್ರೀ ಬಸ್ ಪ್ರಯಾಣ, ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಗೆ 2000 ರೂಪಾಯಿ ಮಾಸಿಕ ಹಣ ನೀಡುವ ಯೋಜನೆ ಹೇಗೆ ಜಾರಿಗೆ ಬಂದಿತ್ತೋ ಅದರಂತೆ ತೆಲಂಗಾಣದಲ್ಲಿ ಮಹಾಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 2500 ಹಣ ನೀಡುವುದಾಗಿ ಘೋಷಿಸಲಾಗಿದೆ. ಜೊತೆಗೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಭರವಸೆಯನ್ನೂ ಕೂಡ ನೀಡಲಾಗಿದೆ.ತೆಲಂಗಾಣದಲ್ಲಿ 119 ವಿಧಾನಸಭಾ ಕ್ಷೇತ್ರಗಳಿದ್ದು, ನವೆಂಬರ್ 30 ರಂದು ಒಂದೇ ಹಂತದಲ್ಲಿ ಚುನಾವಣೆಗಾಗಿ ಸಿದ್ಧತೆ ನಡೆಯುತ್ತಿದೆ.ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ.