ನ್ಯೂಸ್ ನಾಟೌಟ್: ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಮೂರು ಮತ್ತು ಐದು ವರ್ಷಗಳ ಕಾನೂನು ವಿದ್ಯಾರ್ಥಿಗಳ ಪ್ರಸ್ತುತ ಕಾನೂನು ವಿದ್ಯಾಭ್ಯಾಸದ ವಿಷಯಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ಸೋಮವಾರ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಉದಯಕೃಷ್ಣ ಬಿ. ಅಧ್ಯಕ್ಷತೆ ವಹಿಸಿದ್ದರು. ಉದ್ಘಾಟಕರಾಗಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಹೇಮನಾಥ್ ಕೆ.ವಿ. ಮಾತನಾಡಿ, ವಿದ್ಯಾರ್ಥಿಗಳಿಗೆ ಕಾನೂನು ವಿದ್ಯಾಭ್ಯಾಸದ ಮಹತ್ವವನ್ನು ವಿವರಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನೆಹರೂ ಮೆಮೊರಿಯಲ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಮಿಥಾಲಿ ರೈ, ವಿದ್ಯಾರ್ಥಿಗಳು ಕಾನೂನು ವಿದ್ಯಾಭ್ಯಾಸದಲ್ಲಿ ಸಂಪೂರ್ಣ ತೊಡಗಿಸಿಕೊಂಡು ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿಗಳಾಗಿ ಜೀವನ ನಡೆಸುವಂತಾಗಬೇಕು ಎಂದು ಹಾರೈಸಿದರು. ವಿದ್ಯಾರ್ಥಿ ಅನೀಶ್ ಪ್ರಾರ್ಥಿಸಿದರು. ಉಪನ್ಯಾಸಕಿ ಟೀನಾ ಎಚ್.ಎಸ್ ಸ್ವಾಗತಿಸಿ, ಉಪನ್ಯಾಸಕಿ ಕಲಾವತಿ ಎಂ. ವಂದಿಸಿದರು. ಉಪನ್ಯಾಸಕಿ ಅರ್ಚನಾ ಆರ್.ರೈ ಕಾರ್ಯಕ್ರಮ ನಿರೂಪಿಸಿದರು.