ನ್ಯೂಸ್ ನಾಟೌಟ್ : ಮೂರ್ತೆದಾರಿಕೆ ಮಾಡುವ ವೇಳೆ ವ್ಯಕ್ತಿಯೊಬ್ಬರು ತಾಳೆ ಮರದಿಂದ ಬಿದ್ದು ಮೃತಪಟ್ಟ ಘಟನೆ ನ.18 ರಂದು ಸಂಭವಿಸಿದೆ.ಕೊಳ್ತಿಗೆ ಗ್ರಾಮದ ಪಾಂಬಾರು ಜಯಂತ ಪೂಜಾರಿ(53 ವರ್ಷ) ಎಂಬವರು ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಮರದಿಂದ ಬಿದ್ದ ತಕ್ಷಣ ಗಂಭೀರ ಗಾಯಗೊಂಡ ಇವರನ್ನು ಕೂಡಲೇ ಆಂಬ್ಯುಲೆನ್ಸ್ ಮುಖಾಂತರ ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದರೆಂದು ಎನ್ನಲಾಗಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ ಎಂದು ತಿಳಿದು ಬಂದಿದೆ.