ನ್ಯೂಸ್ ನಾಟೌಟ್ : ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಮಾತ್ರವಲ್ಲ ಭಾರಿ ಚರ್ಚೆಗೂ ಕಾರಣವಾಗಿತ್ತು.ಈ ಬಗ್ಗೆ ಸಿನಿಮಾ ಸೇರಿದಂತೆ ಹಲವು ಕ್ಷೇತ್ರದ ಗಣ್ಯರು ಖಂಡಿಸಿದ್ದಾರೆ.ಇದೀಗ ಇದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.
ಎಐ ತಂತ್ರಜ್ಞಾನ ಬಳಸಿ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಸಿನಿಮಾ ಕ್ಷೇತ್ರ ಸೇರಿದಂತೆ ವಿವಿಧ ಗಣ್ಯರು ಇದನ್ನು ವಿರೋಧಿಸಿದ್ದರು. ಈ ವೈರಲ್ ವಿಡಿಯೋ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು.
ಇದೀಗ ಡೀಪ್ಫೇಕ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ದಂಡ ಸಂಹಿತೆ (IPC Section) 465, 469, ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 66C ಮತ್ತು 66E ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಮತ್ತು ತನಿಖೆ ಮಾಡಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಇದು ನಿಜವಾಗಿಯೂ ಆಘಾತಕಾರಿ ವಿಚಾರವಾಗಿದ್ದು, ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದರು.ಇದರ ಬೆನ್ನಲ್ಲೇ ಆದೇಶ ಹೊರಡಿಸಿದ ಕೇಂದ್ರ ಸರ್ಕಾರ ಡೀಪ್ಫೇಕ್ ವಿಡಿಯೋ ಮಾಡುವವರಿಗೆ 3 ಲಕ್ಷ ರೂಪಾಯಿ ದಂಡ ಮತ್ತು 1 ವರ್ಷ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಸಿದೆ.