ನ್ಯೂಸ್ ನಾಟೌಟ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಅರಂತೋಡು ಪೆಟ್ರೋಲ್ ಪಂಪ್ ಬಳಿ ಶುಕ್ರವಾರ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಕಾರು ಮಂಗಳೂರಿನಿಂದ ಮಡಿಕೇರಿ ಕಡೆಗೆ ಸಂಚರಿಸುತ್ತಿತ್ತು. ಅರಂತೋಡು ಪೆಟ್ರೋಲ್ ಪಂಪ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಕಾರು ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಪ್ರಯಾಣಿಕರನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.