ನ್ಯೂಸ್ ನಾಟೌಟ್: ಸುಳ್ಯ ಎನ್ಎಂಸಿಯಲ್ಲಿ ‘ಭಾಷಾ ಸೌಹಾರ್ದತಾ’ ದಿನವನ್ನು ಆಚರಿಸಲಾಯಿತು. ಕಾಲೇಜಿನ ವಿವಿಧ ಭಾಷಾ ವಿಭಾಗಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆದದ್ದು ವಿಶೇಷವಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ ರುದ್ರ ಕುಮಾರ್ ಎಂ.ಎ ವಹಿಸಿದ್ದರು. ನೆಹರು
ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ರೈ ವಿಶೇಷ ಉಪನ್ಯಾಸ ನೀಡಿದರು. ವಿವಿಧ ಭಾಷೆಗಳ ಹಾಡುಗಳನ್ನು ವಿದ್ಯಾರ್ಥಿಗಳು ಹಾಡುವ ಮೂಲಕ ಭಾಷಾ ಸೌಹಾರ್ದತೆ ಮೆರೆದರು. ಹಿಂದಿ ವಿಭಾಗದ ಮುಖ್ಯಸ್ಥೆ ಮಮತ. ಹೆಚ್.ವಿ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಆಂತರಿಕ ಗುಣಮಟ್ಟ ಖಾತರಿ ಕೋಶ ಸಂಯೋಜಕಿ ಡಾ. ಮಮತ.ಕೆ ವಂದಿಸಿದರು. ಭವ್ಯ.ಪಿ.ಎಂ ಇಂಗ್ಲಿಷ್ ವಿಭಾಗ ಮುಖ್ಯಸ್ಥರು ಕಾರ್ಯಕ್ರಮವನ್ನು ಸಂಘಟಿಸಿದರು. ಉಪನ್ಯಾಸಕ, ಉಪನ್ಯಾಸಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.