ನ್ಯೂಸ್ ನಾಟೌಟ್ :ಕಂಠಪೂರ್ತಿ ಕುಡಿದು ಸರ್ಕಾರಿ ಅಧಿಕಾರಿಯೊಬ್ಬರು ಸರಕಾರಿ ವಾಹನವನ್ನೇ ಬೇಕಾಬಿಟ್ಟಿಯಾಗಿ ಚಲಾಯಿಸಿರುವ ಘಟನೆ ಸುಳ್ಯದಿಂದ ವರದಿಯಾಗಿದೆ.ಸುಳ್ಯದ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ವರದಿಯಾಗಿದ್ದು, ಸಾರ್ವಜನಿಕರು ಹಿಗ್ಗಾಮುಗ್ಗ ತರಾಟೆ ತೆಗೆದುಕೊಂಡ ಘಟನೆ ಸೋಮವಾರ (ನ.27) ರಾತ್ರಿ ವರದಿಯಾಗಿದೆ.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕುಡಿದ ಮದ್ಯದ ಮತ್ತಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ವಾಹನ ಚಲಾಯಿಸಿದವರೆಂದು ವರದಿಯಾಗಿದೆ.ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ತಪ್ಪಿದೆ.
ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ,ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆ ಇತ್ತು.ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ. ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.