ನ್ಯೂಸ್ ನಾಟೌಟ್: ಮದ್ಯದ ನಶೆಯಲ್ಲಿ ಪುಂಡ ಮಗನೊಬ್ಬ ಹೆತ್ತ ತಂದೆ-ತಾಯಿಯ ಮೇಲೆಯೇ ಕತ್ತಿಯಿಂದ ದಾಳಿ ನಡೆಸಿದ ಘಟನೆ ಸೋಮವಾರ ಸಂಜೆ ಬೆಳ್ಳಾರೆ ಸಮೀಪದ ಕಲ್ಲುಪಣೆ ಎಂಬಲ್ಲಿ ನಡೆದಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮಗನನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ ಅನ್ನುವ ಮಾಹಿತಿ ಲಭ್ಯವಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ತಂದೆ-ತಾಯಿಯನ್ನು ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಅವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದು ಬಂದಿದೆ. ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಕೃತ್ಯವೆಸಗಿದ್ದು,ಆರೋಪಿ ಕಂಠಪೂರ್ತಿ ಕುಡಿದಿದ್ದನೆಂದು ವರದಿಯಾಗಿತ್ತು. ದೇವಿ ಪ್ರಸಾದ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್, ಧರ್ಮಾವತಿ ದಂಪತಿ ಪುತ್ರ.