ನ್ಯೂಸ್ ನಾಟೌಟ್: ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ದ ಮತ್ತೆ ಗಡಿಪಾರು ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ಈ ಸಂಬಂಧ ದ.ಕ ಜಿಲ್ಲೆಯ ಐವರು ಭಜರಂಗದಳ ಕಾರ್ಯಕರ್ತರಿಗೆ ಇಂದು ( ನ.16ರಂದು) ನೊಟೀಸ್ ತಲುಪಿದ್ದು, ನವೆಂಬರ್ 10ಕ್ಕೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ. ನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾಗಿದ್ದ ಭಜರಂಗದಳ ಕಾರ್ಯಕರ್ತರಿಗೆ ಈ ನೋಟಿಸ್ ನೀಡಲಾಗಿದೆ.
ಇದೀಗ ಈ ಬಗ್ಗೆ ಹಿಂದೂ ಪರ ಸಂಘಟನೆ ಮುಖಂಡರು ಸೇರಿದಂತೆ ಕಾರ್ಯಕರ್ತರು ಆಕ್ರೋಶವನ್ನು ಹೊರಹಾಕಿದ್ದಾರೆ.ಸಂಸದ ನಳಿನ್ ಕುಮಾರ್ ಕಟೀಲ್ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು,ಸರಕಾರದ ಈ ನಡೆಯನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ.ಇದೀಗ ಸುಳ್ಯದಲ್ಲಿಯೂ ಈ ಬಗ್ಗೆ ಆಕ್ರೋಶದ ಮಾತುಗಳು ಕೇಳಿ ಬಂದಿವೆ.ಇದಕ್ಕೆ ಪ್ರತಿಕ್ರಿಯೆ ನೀಡಿದ ಸುಳ್ಯ ಹಿಂದೂ ಪರಿಷತ್ ಪ್ರಖಂಡ ಕಾರ್ಯದರ್ಶಿ ನವೀನ್ ಎಲಿಮಲೆ ‘ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಘಟನೆಯ ಮೂಲಕ ಹಿಂದೂ ಸಮಾಜದ ಕೆಲಸ ಮಾಡುತ್ತಿರುವ ಸಂಘಟನೆಯ ಜವಾಬ್ದಾರಿಯುತ ಕಾರ್ಯಕರ್ತರನ್ನು ಗಡಿಪಾರು ಅಸ್ತ್ರ ಮೂಲಕ ಕುಗ್ಗಿಸುವ,ಬೆದರಿಸುವ ಸರಕಾರದ ಕ್ರಮವನ್ನು ಖಂಡಿಸುತ್ತೇವೆ.ರಾಜ್ಯ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿ ನಡೆಯನ್ನು ತೋರಿಸುತ್ತಿದೆ. ಅನೇಕ ವರುಷಗಳಿಂದ ಹಿಂದೂ ಸಮಾಜದ ಸಂಘಟನೆಯ,ರಕ್ಷಣೆಯ ಕೆಲಸ ಮಾಡುತ್ತಿರುವ ಸುಳ್ಯದ ಲತೀಶ್ ಗುಂಡ್ಯ ಇವರ ಮೇಲೆ ಗಡಿಪಾರು ಅಸ್ತ್ರ ಉಪಯೋಗಿಸಿ ಹಿಂದೂ ಸಂಘಟನೆಯನ್ನು ಹತ್ತಿಕ್ಕುವ ಕೆಲಸ ನಡೆಸುವ ಕ್ರಮವನ್ನು ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸುಳ್ಯ ಹಿಂದೂ ಪರಿಷತ್ ಪ್ರಖಂಡ ಕಾರ್ಯದರ್ಶಿ ನವೀನ್ ಎಲಿಮಲೆ ತಿಳಿಸಿದ್ದಾರೆ.