ನ್ಯೂಸ್ ನಾಟೌಟ್ : ಕೊರೊನಾ ವೈರಸ್ (Covid Virus) ಮತ್ತೆ ಕರ್ನಾಟಕದ ಗಡಿನಾಡು ಕೇರಳದಲ್ಲಿ ಮತ್ತೆ ಸಕ್ರಿಯಗೊಳ್ಳುತ್ತಿದೆ ಎಂಬ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದ್ದು, ದೇಶದ ವಿವಿಧೆಡೆ ಕೋವಿಡ್ ರೂಪಾಂತರಿ ಜೆಎನ್1 ಉಲ್ಬಣ ಗೊಳ್ಳುತ್ತಿದೆ ಎಂದು ವರದಿ ತಿಳಿಸಿದ್ದು, ಕೇರಳ ಸರ್ಕಾರ ಅಯ್ಯಪ್ಪ ಮಾಲಾಧಾರಿಗಳಿಗೆ ನಿಯಮಗಳನ್ನು ಹೇರಲು ನಿರ್ಧರಿಸಿದೆ.
ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಆರೋಗ್ಯ ಇಲಾಖೆ ಸಿಬ್ಬಂದಿಗಳ ಜೊತೆ ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಅಯ್ಯಪ್ಪ ಮಾಲಾಧಾರಿಗಳು ಕೇರಳಕ್ಕೆ ಹೋಗಿ ಬಂದವರು ಕೋವಿಡ್ ಟೆಸ್ಟ್ ಮಾಡಿಸುವ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.
ಕೇರಳದಲ್ಲಿ ಕೋವಿಡ್ ಉಪ ತಳಿ ಜೆಎನ್ 1 (COVID Subvariant JN.1) ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ. ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಕೋವಿಡ್ ಟೆಸ್ಟಿಂಗ್ (Covid Testing) ಆರಂಭಿಸಲಾಗುತ್ತಿದೆ.
ಜ್ವರ, ಶೀತ, ಕೆಮ್ಮಿನಂತಹ ರೋಗ ಲಕ್ಷಣಗಳು ಕಂಡು ಬಂದರೆ ಅಂತಹವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ನಿರ್ಧಾರಿಸಲಾಗಿದೆ ಎಂದು ಕೇರಳ ಆರೋಗ್ಯ ಇಲಾಖೆ ತಿಳಿಸಿದೆ.
ಕೇರಳಕ್ಕೆ ಸಾವಿರಾರು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಭೇಟಿ ನೀಡುತ್ತಿದ್ದಾರೆ. ರಾಜ್ಯದಿಂದಲೂ ಭಕ್ತರು ಹೋಗಿರುತ್ತಿದ್ದು. ಹೀಗಾಗಿ ಕೇರಳಕ್ಕೆ ಹೋಗಿ ಬಂದವರಲ್ಲಿ ರೋಗದ ಲಕ್ಷಣಗಳು ಕಂಡು ಬಂದರೆ ಅವರಿಗೆ ಕೋವಿಡ್ ಪರೀಕ್ಷೆಗೆ ಸೂಚನೆ ನೀಡಲಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಒಂದು ವೇಳೆ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾದರೆ, ನ್ಯೂಇಯರ್ಗೆ ಕೆಲ ಕಠಿಣ ಕ್ರಮಕೈಗೊಳ್ಳಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ.
ಕರ್ನಾಟಕದಲ್ಲಿ ಈವರೆಗೆ 58 ಕೋವಿಡ್ ಪಾಸಿಟಿವ್ ಕೇಸ್ ಇವೆ. ಈ ಪೈಕಿ 11 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ಕು ತಿಂಗಳಿನಲ್ಲಿ ಕೊರೊನಾದಿಂದ ಒಬ್ಬರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಈಗ ಕರೊನಾ ಹೆಚ್ಚಾಗುತ್ತದೆ ಎಂಬ ಬಗ್ಗೆ ಮಾಹಿತಿಯಿದೆ. ಹೀಗಾಗಿ ಕೇಂದ್ರದ ಅಧಿಕಾರಿಗಳ ಜತೆ ನಮ್ಮ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ತಿಳಿಸಿದ್ದಾರೆ. ಐಎಲ್ಐ ಹಾಗೂ ಸಾರಿ ಪ್ರಕರಣ ಕಂಡು ಬಂದರೆ ಕಡ್ಡಾಯವಾಗಿ ಟೆಸ್ಟ್ ಮಾಡಬೇಕು. ಕೊರೊನಾ ಲಕ್ಷಣ ಕಂಡು ಬಂದರೆ ಕಡ್ಡಾಯ ಪರೀಕ್ಷೆಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.